ಹೊತ್ತಿ ಉರಿದ ಗ್ರಾನೈಟ್‌ ಲಾರಿ

KannadaprabhaNewsNetwork |  
Published : Feb 16, 2024, 01:49 AM IST
ಲಾರ | Kannada Prabha

ಸಾರಾಂಶ

ಗ್ರಾನೈಟ್ ಕಲ್ಲು ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರದಲ್ಲಿ‌ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿಯೇ ಇಡೀ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ವಿಜಯಪುರ: ಗ್ರಾನೈಟ್ ಕಲ್ಲು ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರದಲ್ಲಿ‌ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿಯೇ ಇಡೀ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ. ತಮಿಳುನಾಡು ಮೂಲದ ಲಾರಿಗೆ ಬೆಂಕಿ ತಗುಲಿದೆ. ಲಾರಿಗೆ ಬೆಂಕಿ ವ್ಯಾಪಿಸುತ್ತಲೇ ಲಾರಿ ಚಾಲಕ ಹಾಗೂ ಕ್ಲೀನರ್ ಕೆಳಗಿಳಿದು ಜೀವ ರಕ್ಷಣೆ ಮಾಡಿಕೊಂಡಿದ್ದಾರೆ. ಗ್ರಾನೈಟ್ ಕಲ್ಲುಗಳನ್ನು ತುಂಬಿಕೊಂಡು ರಾಜಸ್ತಾನದಿಂದ ಬೆಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ‌. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ