ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಚಿಮ್ಮನಕಟ್ಟಿ

KannadaprabhaNewsNetwork |  
Published : Feb 05, 2024, 01:52 AM IST
ಪೋಟೋ-4 ಜಿಎಲ್ಡಿ2 ಗುಳೇದಗುಡ್ಡದಲ್ಲಿ ರಾಜ್ಯ ಸರ್ಕಾರಿ  ನೌಕರರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕೆರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ನಾಮಫಲಕ ಅನಾವರಣಗೊಳಿಸಿದರು  | Kannada Prabha

ಸಾರಾಂಶ

ಗುಳೇದಗುಡ್ಡ: ತಾಲೂಕು ಸರ್ಕಾರಿ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘಕ್ಕೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ನೌಕರರ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಲ್ಲಿ ಅನುದಾನ ಒದಗಿಸುವುದಾಗಿ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು. ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಯೋಜಿಸಿದ್ದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕರು, ನಿವೃತ್ತ ನೌಕರರು ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ತಾಲೂಕು ಸರ್ಕಾರಿ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘಕ್ಕೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ನೌಕರರ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಲ್ಲಿ ಅನುದಾನ ಒದಗಿಸುವುದಾಗಿ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು.

ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಯೋಜಿಸಿದ್ದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕರು, ನಿವೃತ್ತ ನೌಕರರು ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ನೌಕರರ ಹಲವಾರು ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಸಂಘದ ಯಾವುದೇ ಕೆಲಸಕ್ಕೂ ತಾವು ಸದಾ ಸಿದ್ಧರಿದ್ದು, ನೌಕರರು ದೇಶದ ಆದರ್ಶ ಭವಿಷ್ಯಕ್ಕೆ ಹೆಚ್ಚು ಶ್ರಮಿಸಬೇಕೆಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎಂ.ಬಿ. ಬಳ್ಳಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ನೌಕರರ ಹಲವಾರು ಬೇಡಿಕೆಗಳಿಗೆ ಸಂಘ ಈಗಾಗಲೇ ಸ್ಪಂದಿಸಿ ಹೋರಾಟ ರೂಪಿಸಿ ಸವಲತ್ತುಗಳನ್ನು ಸರ್ಕಾರದಿಂದ ಪಡೆಯುವಲ್ಲಿ ಯಶಸ್ವಿಯಾಗಿದೆ. ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ ಮತ್ತು 7ನೇ ವೇತನ ಆಯೋಗ ಶೀಘ್ರದಲ್ಲಿ ಜಾರಿಗೊಳಿಸುವ ದಿಸೆಯಲ್ಲಿ ಸಂಘ ನಿರಂತರ ಕಾರ್ಯ ರೂಪದಲ್ಲಿದೆ ಎಂದರು.

ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರನ್ನು ಸಂಘದಿಂದ ಸನ್ಮಾನಿಸಲಾಯಿತು. ಸಂಘದ ತಾಲೂಕು ಅಧ್ಯಕ್ಷ ಪಿ.ವಿ. ಜಾಧವ ಅಧ್ಯಕ್ಷತೆ ವಹಿಸಿದ್ದರು.

ತಹಸೀಲ್ದಾರ್‌ ಮಂಗಳಾ ಎಂ., ತಾಪಂ ಅಧಿಕಾರಿ ಎಂ.ಎಸ್. ಬಡಿಗೇರ, ಬಿಇಒ ಎನ್.ವೈ. ಕುಂದರಗಿ, ಮುಖ್ಯಾಧಿಕಾರಿ ಎ.ಎಚ್. ಮುಜಾವರ, ಎಂ.ಬಿ. ದೊಡ್ಡಪ್ಪನವರ, ಗೋಪಾಲ ನೀಲನಾಯಕ, ವಿಠ್ಠಲ ವಾಲಿಕಾರ, ಸುರೇಶ ಇಂಜಿಗನೇರಿ, ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಎಚ್., ರಾಜ್ಯ ಪರಿಷತ್ ಸದಸ್ಯ ಎಸ್.ವಿ. ಗಾಣಿಗೇರ, ಎಸ್.ಎಸ್. ಕೊಟಗಿ, ಆರ್.ಎಂ. ಕೊತವಾಲ, ರವೀಂದ್ರ ಬೇನಾಳ ಹಾಗೂ ವೃಂದ ಸಂಘಗಳ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ