ಕನ್ನಡಪ್ರಭ ವಾರ್ತೆ ಕೆಜಿಎಫ್ಕೆಜಿಎಫ್ ತಾಲೂಕು ಕನ್ನಡ ಸಂಘದ ಅಧ್ಯಕ್ಷರಾಗಿದ್ದ ದಿ.ವಿಜಯಶಂಕರ್ ಮನವಿ ಮೇರೆಗೆ ಕನ್ನಡ ಸಂಘದ ಕಟ್ಟಡ ನಿರ್ಮಾಣಕ್ಕೆ ೨೫ ಲಕ್ಷ ರೂಗಳ ಅನುದಾನ ನೀಡುವುದಾಗಿ ಶಾಸಕಿ ರೂಪಕಲಾ ಶಶಿಧರ್ ಭರವಸೆ ನೀಡಿದಂತೆ ೨೫ ಲಕ್ಷ ರು.ಗಳ ಅನುದಾನ ಬಿಡುಗಡೆಗೊಳಿಸಿದ್ದು, ಶಾಸಕರಿಗೆ ಧನ್ಯವಾದ ಸಲ್ಲಿಸಿದ್ದಾಗಿ ಸುವುದಾಗಿ ಕನ್ನಡ ಸಂಘದ ಅಧ್ಯಕ್ಷ ಪ್ರಸನ್ನರೆಡ್ಡಿ ತಿಳಿಸಿದರು.ನಗರದ ಶಾಸಕರ ಗೃಹ ಕಚೇರಿಯಲ್ಲಿ ಕನ್ನಡ ಸಂಘದ ಪದಾಧಿಕಾರಿಗಳೊಂದಿಗೆ ತೆರಳಿ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಫಲ ತಾಂಬೂಲ ನೀಡಿ ಸನ್ಮಾನಿಸಿ ಮಾತನಾಡಿದರು. ಕನಸು ನನಸಾಗಿದೆ:
ಶಾಸಕಿ ರೂಪಕಲಾಶಶಿಧರ್ ಮಾತನಾಡಿ, ಕನ್ನಡ ಸಂಘದ ಅಧ್ಯಕ್ಷರಾಗಿದ್ದ ದಿ.ವಿಜಯಶಂಕರ್ ರವರು ಕನ್ನಡ ಸಂಘದ ಕಟ್ಟಡ ನಿರ್ಮಿಸುವ ಕನಸು ಕಂಡಿದ್ದರು. ಆಗ ನಾನು ಅವರಿಗೆ ನೀಡಿದ್ದ ಭರವಸೆಯಂತೆ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ೨೫ ಲಕ್ಷ ಅನುದಾನ ಬಿಡುಗಡಗೊಳಿಸಿದ್ದು, ಹಂತ ಹಂತವಾಗಿ ಕಟ್ಟಡ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು. ಮುಂದಿನ ವರ್ಷದ ರಾಜ್ಯೋತ್ಸವ ಕಾರ್ಯಕ್ರಮವನ್ನು ನೂತನ ಕನ್ನಡ ಸಂಘದ ಕಟ್ಟಡದಲ್ಲಿ ಆಚರಣೆ ಮಾಡಬೇಕು ಎಂದು ತಿಳಿಸಿದರು. ಕನ್ನಡ ಸಂಘದ ಉಪಾಧ್ಯಕ್ಷ ತ್ಯಾಗರಾಜ್, ಪದಾಧಿಕಾರಿಗಳಾದ ರಾಮಕೃಷ್ಣ, ಅಶ್ವತ್ಥ್, ದೇಶಪಾಂಡೆ, ಶೇಖರಪ್ಪ ಇದ್ದರು.