ಹಟ್ಟಿ ಮಾರಮ್ಮ ನೂತನ ದೇವಾಲಯ ಜೀರ್ಣೋದ್ಧಾರಕ್ಕೆ ಅನುದಾನ

KannadaprabhaNewsNetwork |  
Published : May 18, 2025 1:41 AM IST
17ಎಚ್ಎಸ್ಎನ್4 : ನುಗ್ಗೇಹಳ್ಳಿ ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ  ಹಟ್ಟಿ ಮಾರಮ್ಮ ದೇವಾಲಯ ನಿರ್ಮಾಣಕ್ಕೆ 1.50  ಲಕ್ಷ  ಅನುದಾನದ ಹಣವನ್ನು  ಶಾಸಕ ಸಿಎನ್ ಬಾಲಕೃಷ್ಣ ಅವರ ಪರವಾಗಿ ಜೆಡಿಎಸ್ ಹಿರಿಯ ಮುಖಂಡ  ಹಾಗೂ ಕೃಷಿ ಪತ್ತಿನ ನಿರ್ದೇಶಕ  ತೋಟಿ ನಾಗರಾಜ್  ದೇವಾಲಯ ಸಮಿತಿ ಸದಸ್ಯರಿಗೆ ಹಸ್ತಾಂತರ ಮಾಡಿದರು.  | Kannada Prabha

ಸಾರಾಂಶ

ನುಗ್ಗೇಹಳ್ಳಿ ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ಸಮಿತಿ ಸದಸ್ಯರಿಗೆ 1.50 ಲಕ್ಷ ಅನುದಾನದ ಹಣವನ್ನು ಶಾಸಕರ ಪರವಾಗಿ ನೀಡಿ ಮಾತನಾಡಿದರು. ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು ವೈಯಕ್ತಿಕವಾಗಿ ಈಗಾಗಲೇ 75 ಸಾವಿರ ಹಣವನ್ನು ನೀಡಿದ್ದಾರೆ. ಇದರ ಜೊತೆಗೆ ಈಗ ಸರ್ಕಾರದಿಂದ 1.50 ಅನುದಾನವನ್ನು ಬಿಡುಗಡೆ ಮಾಡಿಸಿ ದೇವಾಲಯದ ಸಮಿತಿ ಸದಸ್ಯರಿಗೆ ಹಣವನ್ನು ನೀಡಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಹೋಬಳಿಯ ಹೊನ್ನಮಾರನಹಳ್ಳಿ ಗ್ರಾಮದ ಹಟ್ಟಿ ಮಾರಮ್ಮ ನೂತನ ದೇವಾಲಯ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು 1.50 ಲಕ್ಷ ಅನುದಾನವನ್ನು ನೀಡಿದ್ದಾರೆ ಎಂದು ಹಿರಿಯ ಜೆಡಿಎಸ್ ಮುಖಂಡ ಹಾಗೂ ಕೃಷಿ ಪತ್ತಿನ ನಿರ್ದೇಶಕ ತೋಟಿ ನಾಗರಾಜ್ ತಿಳಿಸಿದರು.

ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ಸಮಿತಿ ಸದಸ್ಯರಿಗೆ 1.50 ಲಕ್ಷ ಅನುದಾನದ ಹಣವನ್ನು ಶಾಸಕರ ಪರವಾಗಿ ನೀಡಿ ಮಾತನಾಡಿದರು. ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು ವೈಯಕ್ತಿಕವಾಗಿ ಈಗಾಗಲೇ 75 ಸಾವಿರ ಹಣವನ್ನು ನೀಡಿದ್ದಾರೆ. ಇದರ ಜೊತೆಗೆ ಈಗ ಸರ್ಕಾರದಿಂದ 1.50 ಅನುದಾನವನ್ನು ಬಿಡುಗಡೆ ಮಾಡಿಸಿ ದೇವಾಲಯದ ಸಮಿತಿ ಸದಸ್ಯರಿಗೆ ಹಣವನ್ನು ನೀಡಲಾಗಿದೆ ಎಂದರು.

ಗ್ರಾಮಸ್ಥರ ಒತ್ತಾಯದಂತೆ ಗ್ರಾಮದ ಮಹಾಲಿಂಗೇಶ್ವರ ಸ್ವಾಮಿ ದೇವಾಲಯದಿಂದ ಪುರಾಣ ಪ್ರಸಿದ್ಧ ಮಾಸ್ತಿಯಮ್ಮ ದೇವಾಲಯದ ಹೊರಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇದರ ಜೊತೆಗೆ ಸುಮಾರು 52 ಲಕ್ಷ ವೆಚ್ಚದಲ್ಲಿ ಗ್ರಾಮದ ವಿವಿಧ ಬಡಾವಣೆಗಳ ಕಾಂಕ್ರೀಟ್ ರಸ್ತೆ ಒಳಚರಂಡಿ ನಿರ್ಮಾಣಕ್ಕೆ ಶಾಸಕರು ಅನುದಾನ ನೀಡಿದ್ದಾರೆ. ಗ್ರಾಮದ ಸಮುದಾಯ ಭವನ ನಿರ್ಮಾಣಕ್ಕೆ ಮತ್ತು ಒಂಟಿ ಮಾವಿನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಸೇರಿದಂತೆ ಈ ಭಾಗದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಸಹಕಾರ ನೀಡುತ್ತಾ ಬಂದಿದ್ದಾರೆ. ಮುಂಬರುವ ದಿನಗಳಲ್ಲೂ ಶಾಸಕರು ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು.

ಹಟ್ಟಿ ಮಾರಮ್ಮ ದೇವಾಲಯ ಸಮಿತಿ ಸದಸ್ಯ ದೊಡ್ಡಯ್ಯ ಮಾತನಾಡಿ, ಗ್ರಾಮದ ಪರಿಶಿಷ್ಟ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಹಟ್ಟಿ ಮಾರಮ್ಮ ದೇವಾಲಯ ನಿರ್ಮಾಣಕ್ಕೆ ಶಾಸಕರು ಹೆಚ್ಚಿನ ಸಹಕಾರ ನೀಡಿದ್ದಾರೆ. ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠ್ಠಲ್ ಕುಮಾರ್ ಹಾಗೂ ಮಾಜಿ ಕೃಷಿ ಪತ್ತಿನ ಅಧ್ಯಕ್ಷರಾದ ರಂಗಸ್ವಾಮಿ ಅವರು ಕೂಡ ದೇವಾಲಯ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ಇದರಿಂದ ದೇವಾಲಯದ ನಿರ್ಮಾಣ ಬೇಗ ಪೂರ್ಣಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠ್ಠಲ್ ಕುಮಾರ್, ಮುಖಂಡರಾದ ಮಾಸ್ತಿ ಗೌಡ್ರು, ದೇವಾಲಯ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ, ದೊಡ್ಡಯ್ಯ, ಸುನಿಲ್, ಸೃತಿ, ಶರತ್, ಮೂರ್ತಿ, ಮಂಜು, ಶಶಿಧರ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

PREV