ಕೃತಜ್ಞತೆ ಸಮರ್ಪಣೆ ಸಮಾರಂಭ ಮತ್ತು ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಲೋಕಸಭಾ ಚುನಾವಣೆಯಲ್ಲಿ ಶ್ರಮವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.ಶುಕ್ರವಾರ ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಟ್ಟಣದ ಯು.ಎಸ್.ಕನ್.ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಿದ್ದ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಶ್ರಮಿಸಿದ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಣೆ ಸಮಾರಂಭ ಮತ್ತು ವಿಧಾನ ಪರಿಷತ್ತಿನ ಚುನಾವಣೆ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.ತರೀಕೆರೆಯಲ್ಲಿ ನಾನು ಹೆಚ್ಚಿನ ಸಂಪರ್ಕ ಹೊಂದಿದ್ದೇನೆ ಜನ ನಾಯಕರಿಗೆ ಸಂಪರ್ಕ ತುಂಬಾ ಚೆನ್ನಾಗಿರಬೇಕು. ವಿಧಾನ ಪರಿಷತ್ ಚುನಾವಣೆಯಲ್ಲಿ ಪಧವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ. ಮಂಜುನಾಥ್ ಕುಮಾರ್ ಸ್ಪರ್ಧಿಸಿದ್ದು ಇಬ್ಬರೂ ನನಗೆ ಸ್ನೇಹಿತರು. ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಅಗತ್ಯವಿದೆ. ಅನೇಕ ವಿಷಯಗಳು ವಿಧಾನ ಪರಿಷತ್ತಿನಲ್ಲಿ ಚರ್ಚೆಯಾಗಿ, ಅನೇಕ ಬಿಲ್‌ಗಳು ಪಾಸ್ ಆಗಬೇಕು. ಈ ನಿಟ್ಟಿನಲ್ಲಿ ಗೆಲುವು ಅಗತ್ಯ.
ಮತದಾರರ ಮನ ಒಲಿಸಬೇಕು ಅದಕ್ಕಾಗಿ ಮತದಾರರನ್ನು ಸಂಪರ್ಕಿಸಬೇಕು ಎಂದ ಅವರು ನನ್ನ ಚುನಾವಣೆಯಲ್ಲಿ ಶ್ರಮವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಕೃತಜ್ಞತೆ ಸಮಾರಂಭ ಮತ್ತು ವಿಧಾನ ಪರಿಷತ್ತಿನ ಚುನಾವಣೆ ಪೂರ್ವ ಭಾವಿ ಸಮಾರಂಭ ಈ ಎರಡೂ ವಿಚಾರವಾಗಿ ಎಲ್ಲರೂ ಇಲ್ಲಿ ಸಮಾವೇಶಗೊಂಡಿದ್ದೇವೆ. ಜಯಪ್ರಕಾಶ್ ಹೆಗ್ಡೆ ಅವರ ಚುನಾವಣೆ ಯನ್ನು ನಾವು ಮತ್ತು ಎಲ್ಲರೂ ಹೆಚ್ಚು ಹುಮ್ಮಸ್ಸಿನಿಂದ ಮಾಡಿದ್ದೇವೆ. ಲೋಕಸಬಾ ಚುನಾವಣೆಯಲ್ಲಿ ಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರು ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಪುರಸಭೆ ಸದಸ್ಯರು ಎಲ್ಲರೂ ಬಹಳ ಚೆನ್ನಾಗಿ ನಮ್ಮ ಚುನಾವಣೆ ಎಂದು ಭಾವಿಸಿ ಕೆಲಸ ಮಾಡಿದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರು ಗೆಲ್ಲುವುದು ಖಂಡಿತ ಎಂದು ಹೇಳಿದರು.ವಿಧಾನ ಪರಿಷತ್ ಚುನಾವಣೆಯಲ್ಲೂ ಅದೇ ರೀತಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸೋಣ ಎಂದರು.
ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್..ಯು.ಫಾರೂಕ್ ಮಾತನಾಡಿ ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ನಿಂದ ಲೋಕಸಭಾ ಚುನಾವಣೆ ಕೃತಜ್ಞತಾ ಸಮಾರಂಭ ಮತ್ತು ವಿಧಾನ ಪರಿಷತ್ ಚುನಾವಣೆ ಪೂರ್ವಬಾವಿ ಸಭೆ ನೆಡೆಯತ್ತಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಪಕ್ಷದ ವಿವಿಧ ಪದಾದಿಕಾರಿಗಳು ಶಾಸಕ ಜಿ.ಎಚ್.ಶ್ರೀನಿವಾಸ್ ನೇತೃತ್ವದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೇವೆ. ಎಲ್ಲರಿಗೂ ಕೋಟಿ ಕೋಟಿ ಕೃತಜ್ಞತೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಬಹಳ ಸುಸೂತ್ರವಾಗಿ ಚುನಾವಣೆ ನಡೆಸಿದ್ದಾರೆ, ಕಾಂಗ್ರೆಸ್ ಪಕ್ಷದ ಬಗ್ಗೆ ಒಲುವು ವ್ಯಕ್ತವಾಗಿದೆ. ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಮಗೆ ಹೆಚ್ಚು ಶಕ್ತಿ ಬಂದಿದೆ. ವಿಧಾನ ಪರಿಷತ್ತಿನ ಚುನಾವಣೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಈ ಚುನಾವಣೆ ಯಲ್ಲಿ ನಾವು ಬಹುಮತ ಗಳಿಸುತ್ತೇವೆ ಎಂದು ಹೇಳಿದರು.ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ. ಜಿ, ಕೆಪಿಸಿಸಿ ಸದಸ್ಯರಾದ ಎಚ್.ವಿಶ್ವನಾಥ್, ನಟರಾಜ್, ಶಿವಕುಮಾರ್ , ಮುಖಂಡರಾದ ಎಚ್.ಎಂ.ಗೋಪಿಕೃಷ್ಣ ಮತ್ತಿತರರು ಮಾತನಾಡಿದರು. ಪಕ್ಷದ ಕಾರ್ಯಕರ್ತರು, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಯಾನಂದ್, ಕಾಂಗ್ರೆಸ್ ನಗರಾಧ್ಯಕ್ಷ ಟಿ.ಎಸ್. ಪ್ರಕಾಶ್ ವರ್ಮ, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಭಾಗ್ಯಲಕ್ಷ್ಮಿ, ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್, ಮುಖಂಡರಾದ ಸಮೀವುಲ್ಲಾ ಷರೀಫ್, ಅದಿಲ್ ಪಾಷ, ರಾಜಶೇಖರ್ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
24ಕೆಟಿಆರ್.ಕೆ.4ಃತರೀಕೆರೆಯಲ್ಲಿ ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಏರ್ಪಡಿಸಿದ್ದ ಕೃತಜ್ಞತೆ ಸಮರ್ಪಣೆ ಸಮಾರಂಭ ಮತ್ತು ವಿಧಾನ ಪರಿಷತ್ತಿನ ಚುನಾವಣೆ ಪೂರ್ವಭಾವಿ ಸಭೆ ಉದ್ಘಾಟನಾ ಸಮಾರಂಭ ನಡೆಯಿತು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಶಾಸಕ ಜಿ.ಎಚ್. ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಮತ್ತಿತರರು ಇದ್ದರು.