ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಹೋರಾಟದಿಂದ ಮಾತ್ರ ವ್ಯಕ್ತಿತ್ವ ರೂಪುಗೊಂಡು ಸದೃಢರಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟಿತರಾಗಿ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಎಸ್ಸಿ. ಮೋರ್ಚಾ ಪದಾಧಿಕಾರಿಗಳ ಮೇಲಿದೆ ಎಂದರು.
2022 ರಲ್ಲಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಾತಿಯನ್ನು ಹೆಚ್ಚಿಸಿದರು. 2026 ರಲ್ಲಿ ಕಾಂಗ್ರೆಸ್ ಎಸ್ಸಿ,ಎಸ್ಟಿ ಗಳಿಗೆ ಘೋರ ಅನ್ಯಾಯವೆಸಗಿದೆ. ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು. ಲಂಬಾಣಿ, ಭೋವಿ ಜನಾಂಗದವರನ್ನು ಪರಿಶಿಷ್ಟರ ಪಟ್ಟಿಯಿಂದ ತೆಗೆಯುತ್ತಾರೆಂದು ಕಾಂಗ್ರೆಸ್ ನಮ್ಮ ಪಕ್ಷದ ಮೇಲೆ ಅಪ ಪ್ರಚಾರ ನಡೆಸಿತು. ಇದರ ವಿರುದ್ದ ನೀವುಗಳು ಜಾಗೃತರಾಗಿರಬೇಕೆಂದು ಸಂಸದರು ಎಸ್ಸಿ ಮೋರ್ಚಾ ಪದಾಧಿಕಾರಿಗಳಿಗೆ ಕರೆ ನೀಡಿದರು.ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಚಾರ ನಡೆಸಿ ಪರಿಶಿಷ್ಟ ಜನಾಂಗದವರಿಗೆ ತಪ್ಪು ತಿಳುವಳಿಕೆ ಮೂಡಿಸಿತು. ಪದಾಧಿಕಾರಿಗಳು ಜಿಲ್ಲೆಯಾದ್ಯಂತ ಸಂಚರಿಸಿ ಕಾಂಗ್ರೆಸ್ ವೈಫಲ್ಯಗಳನ್ನು ಜನತೆಗೆ ತಿಳಿಸಬೇಕು. ಕೇಂದ್ರ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲ್ಲ. ಅಸ್ಪೃಶ್ಯತೆ, ಅಸಮಾನತೆ ಎಲ್ಲಿಯವರೆಗೂ ಜೀವಂತವಾಗಿರುತ್ತದೋ ಅಲ್ಲಿಯತನಕ ಮೀಸಲಾತಿ ಇರುತ್ತದೆಂದು ಪ್ರಧಾನಿ ನರೇಂದ್ರಮೋದಿರವರು ಸ್ಪಷ್ಟ ಪಡಿಸಿದ್ದಾರೆ ಎಂದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಕಾಂಗ್ರೆಸ್ ಅಪ ಪ್ರಚಾರದಲ್ಲಿ ತೊಡಗಿದ್ದರಿಂದ 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೊಂದರೆಯಾಯಿತು. ಬಡವರಿಗೆ ಸಹಾಯ ಮಾಡುವ ವ್ಯವಸ್ಥೆಗೆ ಬದಲಾಗಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಅಭಿವೃದ್ದಿಗೆ ಬಳಸಬೇಕಾಗಿರುವ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಉಪಯೋಗಿಸಿಕೊಳ್ಳುತ್ತಿದೆ. ಡಾ.ಬಾಬು ಜಗಜೀವನರಾಂರವರು ದೇಶದ ಪ್ರಧಾನಿಯಾಗುವ ಅವಕಾಶ ತಪ್ಪಿತೆಂದು ನೋವಿನಿಂದ ಹೇಳಿಕೊಂಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಹುಟ್ಟಿಕೊಂಡ ಕಾಂಗ್ರೆಸ್ಸು ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದೆಂದು ಮಹಾತ್ಮಗಾಂಧಿಯೇ ಸೂಚಿಸಿದ್ದರು. ಜಿಲ್ಲೆಯಲ್ಲಿ ಬಿಜೆಪಿಗೆ ಮತ ನೀಡುವವರು ಬಹಳಷ್ಟಿದ್ದಾರೆ. ನಾಯಕರುಗಳ ಕೊರತೆಯಿದೆ. ಮುಂಬರುವ ಎಲ್ಲಾ ಚುನಾವಣೆಯಲ್ಲಿ ಸ್ಪರ್ಧಿಸಲು ನೀವುಗಳು ತಯಾರಾಗಿ ಎಂದು ಎಸ್ಸಿ ಮೋರ್ಚಾ ಪದಾಧಿಕಾರಿಗಳಿಗೆ ತಿಳಿಸಿದರು.
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಪರಶುರಾಂರವರಿಗೆ ಹೀಮದಿನ ಅಧ್ಯಕ್ಷ ತಿಪ್ಪೇಸ್ವಾಮಿ ಪಕ್ಷದ ಭಾವುಟ ನೀಡಿದರು.