ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿ.ಜಿ.ನಗರದ ಪಾಂಚಜನ್ಯ ಆವರಣದಲ್ಲಿ ಬಿಜಿಎಸ್ ಮಾಡೆಲ್ ಪಬ್ಲಿಕ್ ಶಾಲೆ, ಪಿಯು ಕಾಲೇಜು ಹಾಗೂ ಶಿಕ್ಷಣ ಮಹಾ ವಿದ್ಯಾಲಯದಿಂದ ಆಯೋಜಿಸಿದ್ದ ವಿಶ್ವ ಮಾನವ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.
ಕುವೆಂಪುರವರ ಪರಮ ಶ್ರೇಷ್ಠ ೫೯ ಕೃತಿಗಳು, ೧೨ ನಾಟಕಗಳು, ಎರಡು ಕಾದಂಬರಿಗಳು, ಜ್ಞಾನಪೀಠ ತಂದುಕೊಟ್ಟ ಮಹಾ ಕೃತಿ ಶ್ರೀರಾಮಾಯಣ ದರ್ಶನಂ ಬರೆದ ಕನ್ನಡ ನಾಡಿನ ಕವಿಶ್ರೇಷ್ಠ ಕುವೆಂಪು ಅವರ ಸಾಹಿತ್ಯದಲ್ಲಿ ವಿಶ್ವಮಾನವ ಪ್ರಜ್ಞೆಯೊಂದಿಗೆ ಶೂದ್ರ, ದಲಿತ, ಸ್ತ್ರೀ ಧಾರ್ಮಿಕ, ಆಧ್ಯಾತ್ಮಿಕ, ಭಾಷಾ ಹಾಗೂ ಪ್ರಾಕೃತಿಕ ಪ್ರಜ್ಞೆಗಳನ್ನು ಕಾಣುತ್ತೇವೆ ಎಂದರು.ಆದಿಚುಂಚನಗಿರಿ ವಿಶ್ವವಿದ್ಯಾಲಯದ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗದ ಡೀನ್ ಡಾ.ಎ.ಟಿ.ಶಿವರಾಮು ಮಾತನಾಡಿ, ಕನ್ನಡದ ಎರಡನೇ ರಾಷ್ಟ್ರಕವಿ ಪ್ರಶಸ್ತಿ ಪಡೆದ ಕುವೆಂಪುರವರು ಜ್ಞಾನಪೀಠ, ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಹಾಗೂ ಕರ್ನಾಟಕ ರತ್ನ ಪ್ರಶಸ್ತಿಗಳನ್ನು ಪ್ರಥಮ ಬಾರಿಗೆ ಕನ್ನಡಕ್ಕೆ ತಂದುಕೊಟ್ಟಿದ್ದಾರೆ. ತಮ್ಮ ಸಾಹಿತ್ಯದ ಮೂಲಕ ವೈಚಾರಿಕತೆ, ನಾಡು ನುಡಿ, ದೇಶಪ್ರೇಮ, ಭ್ರಾತೃತ್ವ ವಿಶ್ವಮಾನವತೆ, ಪ್ರಕೃತಿ ಸೌಂದರ್ಯ, ಜೀವನ ಪ್ರೀತಿ, ಆಧ್ಯಾತ್ಮಿಕತೆ ಮತ್ತು ವೈಜ್ಞಾನಿಕತೆಯನ್ನು ಎಲ್ಲರೆದೆಯಲ್ಲೂ ಮೂಡಿಸಿದರು ಎಂದರು.
ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ವಿ.ಪುಟ್ಟಸ್ವಾಮಿ ಮಾತನಾಡಿ, ಹುಟ್ಟುತ್ತಾ ವಿಶ್ವಮಾನವನಾಗಿ, ಬೆಳೆಯುತ್ತಾ ಕಟ್ಟುಪಾಡುಗಳಿಂದ ಅಲ್ಪ ಮಾನವನನ್ನಾಗಿಸುತ್ತಿವೆ. ಶಿಕ್ಷಣ, ಮನುಕುಲದ ಮೌಲ್ಯಗಳನ್ನು ರೂಢಿಸುತ್ತಾ ಮತ್ತೆ ವಿಶ್ವಮಾನವನ್ನಾಗಿಸುವುದೇ ಸಾರ್ಥಕತೆಯೆಂದು ಕುವೆಂಪು ಅವರ ಆದರ್ಶಯುತ ಸಂದೇಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.