ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಅವರು ಮಂಗಳವಾರ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ನುಲಿಯಚಂದ್ರಯ್ಯ, ಬ್ರಹ್ಮಶ್ರೀ ನಾರಾಯಣಗುರು ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮದಿನೋತ್ಸವ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಿಶೇಷವಾಗಿ ನಾಡಿನ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಓಂಕಾರ ಬರೆದವರೇ ದಿವಂಗತ ಡಿ. ದೇವರಾಜ ಅರಸುರವರು. ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯ ಕರ್ನಾಟಕ ರಾಜ್ಯವಾಯಿತು. ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ ಆ ಸಮುದಾಯದ ಅಭಿವೃದ್ಧಿಗೆ ಪ್ರೇರಕ ಶಕ್ತಿಯಾಗಿ ನಿಂತವರು ಎಂದು ಸ್ಮರಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಈಡಿಗ ಸಮಾಜದ ಅಧ್ಯಕ್ಷ ರವಿಕುಮಾರ್, ಸಮುದಾಯದ ಮುಖಂಡರಾದ ಕೆ.ಜೆ. ಅಶೋಕ್ ಕುಮಾರ್, ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ್, ಎಂ.ಜೆ. ರಾಘವೇಂದ್ರ, ಕೆ. ವೀರಭದ್ರಪ್ಪ, ಕವಿತಾ ಬೋರಯ್ಯ, ನಾಮಿನಿ ಸದಸ್ಯ ನೇತಾಜಿ ಪ್ರಸನ್ನ, ಬಡಗಿ ಪಾಪಣ್ಣ, ಆರ್. ವೀರಭದ್ರಪ್ಪ, ಅನ್ವರ್ ಮಾಸ್ಟರ್, ಪೌರಾಯುಕ್ತರ ಜಗರೆಡ್ಡಿ, ಇಒ ಎಚ್. ಶಶಿಧರ, ಶಿರಸ್ಥೇದಾರ್ ಸದಾಶಿವಪ್ಪ ಮುಂತಾದವರು ಉಪಸ್ಥಿತರಿದ್ದರು.