ಮಧ್ವಾಚಾರ್ಯರು ಈ ನಾಡು ಕಂಡ ಶ್ರೇಷ್ಠ ದಾರ್ಶನಿಕರು. ಅವರು ಬಡವ ಬಲ್ಲಿದ ಭೇದವಿಲ್ಲದೆ ಜಾತಿ ಧರ್ಮವ ಮೀರಿ ಎಲ್ಲರ ಏಳಿಗೆಯನ್ನು ಬಯಸುತ್ತಿದ್ದರು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್ ಹೇಳಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಮಧ್ವಾಚಾರ್ಯರು ಈ ನಾಡು ಕಂಡ ಶ್ರೇಷ್ಠ ದಾರ್ಶನಿಕರು. ಅವರು ಬಡವ ಬಲ್ಲಿದ ಭೇದವಿಲ್ಲದೆ ಜಾತಿ ಧರ್ಮವ ಮೀರಿ ಎಲ್ಲರ ಏಳಿಗೆಯನ್ನು ಬಯಸುತ್ತಿದ್ದರು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್ ಹೇಳಿದರು.
ಬುಧವಾರ ನಗರದ ತುಳುಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತತ್ವವಾದ ಸಿದ್ಧಾಂತ ಪ್ರತಿಪಾದಕ ಮಧ್ವಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಬುಧವಾರ ಮಾತನಾಡಿದರು.
ಉಡುಪಿಯ ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ರಾಜಗೋಪಾಲಾಚಾರ್ ಉಪನ್ಯಾಸ ನೀಡಿ, ಜನಸೇವೆಯು ಉಪಕಾರವಾಗುವುದಿಲ್ಲ. ಅದನ್ನು ದೇವರಿಗೆ ಕಟ್ಟುವ ತೆರಿಗೆ ಎಂದು ಪರಿಗಣಿಸಬೇಕು ಇದು ಮಧ್ವಾಚಾರ್ಯರು ಕೊಟ್ಟಿರುವ ಸಂದೇಶ ಎಂದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಮಾತನಾಡಿ, ಮಧ್ವಾಚಾರ್ಯರು ತುಳವರು ಹಾಗೂ ತುಳು ಭಾಷೆಯ ಬೆಳವಣಿಗೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಕರ್ನಾಟಕ ಧಾರ್ಮಿಕ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಸುಬ್ರಹ್ಮಣ್ಯ ಪ್ರಸಾದ್ ಕೊರಿಯಾರ್ ವಂದಿಸಿದರು. ಗಣೇಶ್ ಹೆಬ್ಬಾರ್ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.