ಕನ್ನಡಪ್ರಭ ವಾರ್ತೆ ಮಂಗಳೂರು
ಸುಮಾರು 321 ಕಿ.ಮೀ. ಕರ್ನಾಟಕ ಕರಾವಳಿಯ ತೀರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ಅವಕಾಶ ಹೆಚ್ಚಿದೆ. ಸುಸ್ಥಿರತೆಯನ್ನು ಉಳಿಸಿಕೊಂಡು ಹೂಡಿಕೆದಾರರನ್ನು ಆಕರ್ಷಿಸುವ ಮೂಲಕ ಕರಾವಳಿ ತೀರದ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಬಹುದು. ಇಂತಹ ಕಾರ್ಯಾಗಾರದಲ್ಲಿ ಹೂಡಿಕೆದಾರರ ಜತೆಗೆ ಇತರರ ಜತೆಗೆ ಚರ್ಚೆ ನಡೆಸಿಕೊಂಡು ಅದಕ್ಕೊಂದು ರೂಪ ನೀಡುವ ಕೆಲಸವನ್ನು ಮಾಡಲಿದ್ದೇವೆ ಎಂದರು.ಟೂರಿಸಂಗೆ ರೋಡ್ ಮ್ಯಾಪ್:
ಕರಾವಳಿ ಕರ್ನಾಟಕದ ಬೀಚನ್ನು ಮ್ಯಾಪಿಂಗ್ ಮಾಡಿ, ನಾನಾ ವಲಯಗಳನ್ನಾಗಿ ಮಾಡಿ ಅವುಗಳಿಗೆ ಪೂರಕವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲು ಉದ್ದೇಶಿಸಲಾಗಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಟೂರಿಸಂ ರೋಡ್ ಮ್ಯಾಪ್ ಸಿದ್ಧಗೊಳಿಸುವುದು ಉದ್ದೇಶಿಸಲಾಗಿದೆ. ಈ ಮೂಲಕ ಪ್ರವಾಸೋದ್ಯಮಕ್ಕೆ ಪೂರಕವಾದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದರು.ಕರಾವಳಿಗೆ ಮೆಗಾ ಟೂರಿಸಂ ಪ್ರಾಜೆಕ್ಟ್:
ಅಂತಾರಾಷ್ಟ್ರೀಯಯ ಪ್ರವಾಸೋದ್ಯಮ ಕೇಂದ್ರ ಚಿಂತನೆ: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯಯ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಪೂರಕವಾಗಿ ಸೋಮೇಶ್ವರದಲ್ಲಿ ದೇಶದಲ್ಲೇ ಮೊದಲ ಅಂತಾರಾಷ್ಟ್ರೀಯ ವಿಹಾರ ನೌಕಾಯಾನ ಬಂದರು, 1.5 ಎಕರೆ ಪ್ರದೇಶದಲ್ಲಿ ಕಡಲ ವಸ್ತುಸಂಗ್ರಹಾಲಯ, ಮಂಗಳೂರು ನೇತ್ರಾವತಿ ನದಿ ಬಳಸಿಕೊಂಡು ವಾಟರ್‌ಡ್ರೋಮ್ ಯೋಜನೆ ಸರ್ಕಾರದ ಹಂತದಲ್ಲಿದೆ. ಮಂಗಳೂರು ಮತ್ತು ಲಕ್ಷದ್ವೀಪದ ನಡುವೆ ಸಂಪರ್ಕ ಕಲ್ಪಿಸಲು ಸುಸಜ್ಜಿತ ಬಂದರು ನಿರ್ಮಾಣ ಪ್ರಸ್ತಾವನೆಗಳು ಆರಂಭಿಕ ಹಂತದಲ್ಲಿವೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿ ಸಿಇಒ ಜಯರಾಮ್ ರಾಯಪುರ ಹೇಳಿದರು.ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇದ್ದರು. ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಸಿಆರ್‌ಝಡ್, ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧಿಕಾರಿಗಳು ಪ್ರವಾಸೋದ್ಯಮಕ್ಕೆ ಪೂರಕವಾದ ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ದಿಲೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.