ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಹರವೆ ಗ್ರಾಮದ ಹತ್ತಿರದಲ್ಲಿನ ಗುಂಡ್ಲುನಿಂದ ಮಲೆಯೂರು ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ೫೦೦ ಮೀಟರ್ ರಸ್ತೆ ಅಭಿವೃದ್ಧಿಗಾಗಿ ₹1 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ ಬದನವಾಳುನಿಂದ ರಾಜ್ಯ ಹೆದ್ದಾರಿ ೧೫೦ನಿಂದ ವೀರನಪುರ ಕ್ರಾಸ್‌ಗೆ ಸೇರುವ ರಸ್ತೆಯನ್ನು ಅಭಿವೃದ್ಧಿಪಡಿಸಲು ಸಿಎಂ ವಿಶೇಷ ಅನುದಾನದಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಮಲೆಯೂರಿನಿಂದ ಹರವೆ ಮಾರ್ಗದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ, ಕಾಮಗಾರಿ ಪ್ರಗತಿಯಲ್ಲಿದೆ. ಈಗ ಹರವೆಯ ಗುಂಡ್ಲುದಿಂದ ಮಲೆಯೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದೇವೆ ಎಂದರು.ಹರವೆ ಗುಂಡ್ಲು ಸೇತುವೆ ನಿರ್ಮಾಣಕ್ಕೆ ₹೨.೫೦ ಕೋಟಿ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ. ಅಂತಿಮವಾಗುತ್ತಿದ್ದಂತೆ ಈ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ. ಚಿಕ್ಕಬೇಗೂರು, ಹರವೆ ಮಾರ್ಗದ ಮುಖ್ಯ ರಸ್ತೆ ಅಭಿವೃದ್ದಿಗೆ ₹೧೦ ಕೋಟಿ ಬಿಡುಗಡೆಯಾಗಿದ್ದು, ₹೬ ಕೋಟಿ ಹರವೆ ಭಾಗದ ರಸ್ತೆಗೆ ಸೇರ್ಪಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಹರವೆ ಭಾಗದ ಆರು ಪಂಚಾಯಿತಿ ವ್ಯಾಪ್ತಿ ಗ್ರಾಮಗಳ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಶ್ರಮ ವಹಿಸಿದ್ದು, ಇನ್ನು ಎರಡು ವರ್ಷಗಳ ಅವಧಿಯಲ್ಲಿ ಹರವೆ ಹೋಬಳಿಯನ್ನು ಮಾದರಿಯನ್ನಾಗಿ ಮಾಡುವ ಗುರಿ ನಮ್ಮದಾಗಿದೆ. ಎಲ್ಲಾ ಗ್ರಾಮಗಳಲ್ಲಿ ಎಲ್ಲಾ ವರ್ಗಗಳ ಜನರು ವಾಸಿಸುವ ಬಡಾವಣೆಗಳಿಗೆ ಈಗಾಗಲೇ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಮುಂದೆ ಇನ್ನು ಹೆಚ್ಚಿನ ಅನುದಾನವನ್ನು ನೀಡುವುದಾಗಿ ಎಚ್.ಎಂ. ಗಣೇಶ್ ಪ್ರಸಾದ್ ತಿಳಿಸಿದರು.