ಕನ್ನಡಪ್ರಭ ವಾರ್ತೆ ಚಾಮರಾಜನಗರ
ನನ್ನನ್ನು ಹೆಚ್ಚಿನ ಬಹುಮತದಲ್ಲಿ ಗೆಲ್ಲಿಸಿದರೆ, ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿ, ಸರ್ಕಾರದ ಯೋಜನೆಗಳು ಸಮರ್ಥವಾಗಿ ತಲುಪುವಂತೆ ಶ್ರಮಿಸುವುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು. ತಾಲೂಕಿನ ವಿವಿಧ ಜಿಪಂ .ಕ್ಷೇತ್ರ ಸ್ಥಾನಗಳಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಸಿದ್ದಯ್ಯನಪುರ, ಹರದನಹಳ್ಳಿ, ವೆಂಕಟಯ್ಯನಛತ್ರ, ಅಮಚವಾಡಿ, ಅರಕಲವಾಡಿ, ಭೋಗಾಪುರ, ಪಣ್ಯದಹುಂಡಿ ಹಾಗೂ ನಂಜೇದೇವನಪುರ ಪಂಚಾಯಿತಿ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.ಶಾಸಕರಾದ ಪುಟ್ಟರಂಗಶೆಟ್ಟರ ನೇತೃತ್ವದಲ್ಲಿ ಕ್ಷೆತ್ರವನ್ನು ಇನ್ನು ಹೆಚ್ಚಿನ ಅಭಿವೃದ್ಧಿಪಡಿಸಲು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಸಂಸದರಾಗಿದ್ದ ವಿ. ಶ್ರೀನಿವಾಸಪ್ರಸಾದ್, ದಿ. ಆರ್. ಧ್ರುವನಾರಾಯಣ, ಎಂ. ಶಿವಣ್ಣ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದು, ಅವರು ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಸ್ಮರಿಸುತ್ತಾ. ಇನ್ನು ಹೆಚ್ಚಿನ ಸೇವೆ ಮಾಡಲು ನನಗೊಂದು ಅವಕಾಶ ನೀಡಿ, ಹೆಚ್ಚಿನ ಬಹುಮತದಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಬಡವರ ಪಕ್ಷವಾಗಿದೆ. ದೀನದಲಿತರು, ಬಡವರ ಪಕ್ಷವಾಗಿದ್ದು, ಎಲ್ಲಾ ವರ್ಗದ ಜನರಿಗೆ ತಲುಪವಂತ 5 ಗ್ಯಾರಂಟಿಗಳನ್ನು ನೀಡಿದ್ದಾರೆ. ಇವೆಲ್ಲರು ಸಹ ಜನಸಾಮಾನ್ಯರಿಗೆ ಕೈಗೆಟುಕುವ ಯೋಜನೆಗಳಾಗಿವೆ. ಇದನ್ನು ಎಲ್ಲರು ಮನದಟ್ಟು ಮಾಡಿಕೊಂಡು ಅಭಿವೃದ್ಧಿಯತ್ತ ಕಾಂಗ್ರೆಸ್ ಬೆಂಬಲಿಸಬೇಕು ಎಂದರು. ಸಭೆಯಲ್ಲಿ ಮಾಜಿ ಸಂಸದ ಎಂ. ಶಿವಣ್ಣ, ಜಿ.ಪಂ. ಮಾಜಿ ಸದಸ್ಯ ಆರ್. ಬಾಲರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಇತರರು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್. ಮಹದೇವ್, ಬ್ಲಾಕ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜಲ್ ಷರೀಪ್, ಲಕ್ಷ್ಮಿನಾರಾಯಣ್, ರಾಜ್ಯ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಪು. ಶ್ರೀನಿವಾಸನಾಯಕ, ಅಯ್ಯನಪುರ ಶಿವಕುಮಾರ್, ಚಿನ್ನಸ್ವಾಮಿ, ಮಹೇಶ್ ಕುದರ್, ಹಿಂದುಳಿದ ವರ್ಗಗಳ ಘಟಕದ ರಾಜ್ಯಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೇವಶೆಟ್ಟಿ, ಜಿ.ಪಂ. ಮಾಜಿ ಸದಸ್ಯರಾದ ಸದಾಶಿವಮೂರ್ತಿ, ಗೋವಿಂದರಾಜು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಉಮ್ಮತ್ತೂರು ಭಾಗ್ಯ, ನಾಗರತ್ನ, ಚಿನ್ನಮ್ಮ, ಕಲಾವತಿ, ಕಾವೇರಿ ಶಿವಕುಮಾರ್, ಶಿವಮೂರ್ತಿ, ಶಿವಸ್ವಾಮಿ, ಪಿ. ಶೇಖರ್ ಮೊದಲಾದವರು ಇದ್ದರು. 14ಸಿಎಚ್‌ಎನ್21
ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಸಿದ್ದಯ್ಯನಪುರ ಗ್ರಾಮದಲ್ಲಿ ಮತಯಾಚನೆ ಮಾಡಿದರು.