ಕನ್ನಡಪ್ರಭ ವಾರ್ತೆ ಕೊರಟಗೆರೆ
ತಾಲೂಕಿನ ಶಾಂತಲಿಂಗಯ್ಯನಪಾಳ್ಯ ಗ್ರಾಮದ ಮುಖ್ಯ ರಸ್ತೆಗೆ ಸುಮಾರು ೬೦ ಲಕ್ಷ ರು. ಕಾಮಗಾರಿ ಉದ್ಘಾಟಿಸಿ ಹಾಗೂ ಬಿ.ಡಿ.ಪುರ ಗ್ರಾಮದಲ್ಲಿ ೪೦ ಲಕ್ಷ ರು.ಗಳ ಗ್ರಾಪಂ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕೊರಟಗೆರೆ ಕ್ಷೇತ್ರದಲ್ಲಿ ಹಲವು ಗ್ರಾಮಗಳಲ್ಲಿ ದಶಕಗಳಿಂದ ರಸ್ತೆಗಳು ಅಭಿವೃದ್ದಿ ಹೊಂದಿಲ್ಲ ಎನ್ನುವ ಗ್ರಾಮಸ್ಥರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳಿಂದ ೫೦ ಕೋಟಿಗಳ ರುಗಳ ವಿಶೇಷ ಅನುದಾನದಲ್ಲಿ ಗ್ರಾಮಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.ತಾಲೂಕಿನ ಜನರ ಬೇಡಿಕೆಯಂತೆ ಈಗಾಗಲೇ ತೋವಿನಕೆರೆ ಹೋಬಳಿ ಕೇಂದ್ರದಲ್ಲಿ ೩೬ ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕೊರಟಗೆರೆ ಪಟ್ಟಣದಲ್ಲಿ ೩೨ ಕೋಟಿ ರು.ಗಳ ವೆಚ್ಚದಲ್ಲಿ ತಾಯಿ ಮಕ್ಕಳ ಆಸ್ಪತ್ರೆಗೆ ಅಡಿಗಲ್ಲು ಮಾಡಲಾಗುವುದು. ಕೋಳಾಲ ಹೋಬಳಿ ಕೇಂದ್ರದ ಆಸ್ಪತ್ರೆಯನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಈ ವೇಳೆ ಎಸ್ಪಿ ಕೆ.ವಿ. ಅಶೋಕ್, ಮಧುಗಿರಿ ಎಸಿ ಶಿವಪ್ಪ ಗೋಟೂರು, ತಹಸೀಲ್ದಾರ್ ಮಂಜುನಾಥ್, ಇಒ ಅಪೂರ್ವ, ಗ್ರಾಪಂ ಅಧ್ಯಕ್ಷೆ ಸೌಮ್ಯ, ಪಿಡಿಒ ಲಕ್ಷ್ಮೀನಾರಾಯಣ್, ಮುಖಂಡರಾದ ಅಶ್ವಥ್‌ನಾರಾಯಣ್, ಅರಕೆರೆ ಶಂಕರ್, ಜಯಮ್ಮ, ರಾಜಣ್ಣ, ಕವಿತಾ, ದೇವರಾಜು, ಜಯರಾಮು, ಮಹಾಲಿಂಗಪ್ಪ, ರವಿಕುಮಾರ್, ಹನುಮಂತರಾಜು, ಅಟಿಕನಾಗರಾಜು, ಸೇರಿದಂತೆ ಇತರರಿದ್ದರು.