ಕನ್ನಡಪ್ರಭ ವಾರ್ತೆ ಸಿರಿಗೆರೆ
ಸಿರಿಗೆರೆ ಸಮೀಪದ ಆಲಘಟ್ಟ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರಿಗೆ ಹಮ್ಮಿಕೊಳ್ಳಲಾದ ಅಭಿನಂದನ ಸಮಾರಂಭವವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ಅಭಿವೃದ್ಧಿ ಕೆಲಸ ಮಾಡುವುದಕ್ಕೆ ಆಯಾ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಹಕಾರ ಅತ್ಯಂತ ಮುಖ್ಯವಾಗಿರುತ್ತದೆ, ಆದ್ದರಿಂದ ಆಲಘಟ್ಟ ಗ್ರಾಮದ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳ ಗ್ರಾಮ ಪಂಚಾಯತಿ ಸದಸ್ಯರ ಸಹಕಾರವನ್ನು ಯಶಸ್ವಿಯಾಗಿ ನೀಡಿದ್ದಾರೆ ಎಂದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳು ಅಭಿವೃದ್ಧಿಯ ವಿಚಾರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೇ ಅವರ ಸಹಭಾಗಿತ್ವ ಅತ್ಯಂತ ಅವಶ್ಯಕವಾಗಿರುತ್ತದೆ ಅವರ ಮಾರ್ಗದರ್ಶನದ ಅಡಿಯಲ್ಲಿ ಸರ್ಕಾರದ ಅಡಿಯಲ್ಲಿ ನಿರ್ವಹಿಸುತ್ತಿರುವ ಅಧಿಕಾರಿಗಳ ಸಹಕಾರದಿಂದ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ನಾಗರಾಜಪ್ಪ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ವಿಶ್ವಾಸವನ್ನು ಗಳಿಸಿ ಅಭಿವೃದ್ಧಿಯ ಕಡೆಗೆ ದಾಪುಗಾಲು ಹಾಕಲು ಸಹಕಾರಿಯಾಗಿದೆ. ಇದರ ನಡುವೆ ಸರಕಾರದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಹ ಗ್ರಾಮ ಪಂಚಾಯಿತಿ ಹಳ್ಳಿಗಳ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಆಲಘಟ್ಟ, ಓಬವ್ವನಗಾತಿಹಳ್ಳಿ, ಚಿಕ್ಕಾಲಗಟ್ಟ, ವಡ್ಡರ ಸಿದ್ದನಹಳ್ಳಿ, ಕೋಣನೂರು, ಚಿಕ್ಕೇನಹಳ್ಳಿ, ಬೊಮ್ಮವ್ವನಾಗತಿಹಳ್ಳಿ ಗ್ರಾಮಗಳ ಚುನಾಯಿತ ಗ್ರಾಮ ಪಂಚಾಯತಿ ಸದಸ್ಯರಿಗೆ ಬೀಳ್ಕೊಡುಗೆ ನೀಡಲಾಯಿತು.