ಉಪ್ಪಾರ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಹೆಚ್ಚಿನ ಪ್ರಾತಿನಿಧ್ಯ

KannadaprabhaNewsNetwork |  
Published : Nov 18, 2026, 01:45 AM IST
ಚಿತ್ರ 2 | Kannada Prabha

ಸಾರಾಂಶ

ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಮಂಗಳವಾರ ಸಚಿವ ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮುದಾಯ ಹಾಗೂ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ರಾಜ್ಯದಲ್ಲಿ ಉಪ್ಪಾರ ಸಮುದಾಯಕ್ಕೆ ಅತಿ ಹೆಚ್ಚು ರಾಜಕೀಯ ಪ್ರಾತಿನಿಧ್ಯ ನೀಡಿದ ಯಾವುದಾದರೂ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಹಾಗಾಗಿ ಬರಲಿರುವ ಉಪ ಚುನಾವಣೆಯಲ್ಲಿ ನಮ್ಮ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅತಿ ಹೆಚ್ಚು ಮತಗಳಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಮಂಗಳವಾರ ಉಪ್ಪಾರ ಸಮುದಾಯ ಹಾಗೂ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್‌ ಅರಸುರವರ ಕಾಲದಿಂದಲೂ ಉಪ್ಪಾರ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದೆ. ಆಗಿನ ಕಾಲದಲ್ಲಿಯೇ ಸಮುದಾಯಕ್ಕೆ ಎಂಎಲ್‌ಸಿ ಸ್ಥಾನ ನೀಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಪಕ್ಷ ಉಪ್ಪಾರ ಸಮುದಾಯದ ಬೆನ್ನಿಗೆ ಸದಾ ನಿಂತಿದೆ. ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ನಮ್ಮ ಸಮುದಾಯಕ್ಕೆ ಜಿಪಂ ಅಧ್ಯಕ್ಷ ಸ್ಥಾನಗಳು ಸಿಗಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ ಎಂದರು.

ಬಬ್ಬೂರು ಗ್ರಾಮಕ್ಕೆ ಮುಂದಿನ 15 ದಿನದಲ್ಲಿ ವಿವಿ ಸಾಗರದಿಂದ ಕುಡಿಯುವ ನೀರು ಕೊಡಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಗಿದೆ. ಅವಶ್ಯಕತೆಯಿದ್ದರೆ ಸಿಎಸ್‌ಆರ್ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಡುತ್ತೇವೆ. ರಸ್ತೆ ಅಭಿವೃದ್ಧಿ, ಚರಂಡಿ ಸ್ವಚ್ಛತೆ, ರುದ್ರಭೂಮಿಗೆ ಜಾಗ ಮಂಜೂರಾತಿಗೆ ಕ್ರಮ ವಹಿಸುತ್ತೇನೆ ಎಂದರು.

ತಾಲೂಕಿನ ಉಪ್ಪಾರ ಸಮುದಾಯ ಭವನಕ್ಕೆ ₹2 ಕೋಟಿ ಅನುದಾನ ನೀಡಲಾಗಿದೆ. ಇಲ್ಲಿನ ಉಪ್ಪಾರ ಭವನದ ದಾರಿ ಸಮಸ್ಯೆ ಈಗ ತಾನೇ ನನ್ನ ಗಮನಕ್ಕೆ ಬಂದಿದ್ದು ಈ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು. ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ವರದಿ ಸಿದ್ದವಾಗಿದೆ. ಅದನ್ನು ಕೂಲಂಕುಷವಾಗಿ ಪರೀಶಿಲಿಸಿ ಸಮರ್ಪಕ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲು ಕ್ರಮವಹಿಸುತ್ತೇನೆ ಎಂದರು.

ಎಸ್‌ಆರ್‌ಐ ಗೊಂದಲ ಸದ್ಯದಲ್ಲಿಯೇ ಬಗೆಹರಿಯಲಿದೆ. ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡುವುದಿಲ್ಲ. ಶೀಘ್ರದಲ್ಲಿಯೇ ದಿನಾಂಕ ಘೋಷಣೆಯಾಗಲಿದೆ. ಕಾಂಗ್ರೆಸ್ ಪಕ್ಷದ ಸಂಪ್ರದಾಯದoತೆ ಡಿ.ಸುಧಾಕರ್ ಅವರ ಕುಟುಂಬಕ್ಕೆ ಟಿಕೆಟ್ ಸಿಗಲಿದೆ. ಬಡವರ ಪರವಾಗಿ ಕೆಲಸ ಮಾಡುತ್ತಿರುವ ನಮ್ಮ ಕಾಂಗ್ರೆಸ್ ಪಕ್ಷವನ್ನು ಅತಿ ಹೆಚ್ಚು ಮತದಿಂದ ಗೆಲ್ಲಿಸಬೇಕು. ಈಗಾಗಲೇ ಪಶುಸಂಗೋಪನೆ ಇಲಾಖೆಯಿಂದ ಮೂರುವರೆ ಲಕ್ಷ ಕಿಟ್ ವಿತರಿಸಿದ್ದು ಇನ್ನೂ ಆರುವರೆ ಲಕ್ಷ ಕಿಟ್ ವಿತರಿಸಲು ಸಿದ್ಧತೆ ನಡೆದಿದೆ. ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ನೀಗಿಸಲು ಸುಮಾರು 400 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದ್ದು ಅದಕ್ಕೆ ತಡೆ ಹಿಡಿಯಲಾಗಿದೆ. ಈಗ ಮತ್ತೆ 300 ವೈದ್ಯರ ನೇಮಕಕ್ಕೆ ಕ್ರಮವಹಿಸಿದ್ದೇನೆ. ಹೊಸ ಪಶು ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತಲಾ 9,660 ಹಸು, ಕುರಿಗಳನ್ನು ನೀಡಲಾಗಿದೆ. ಅದರಂತೆ ಎಲ್ಲಾ ಜಿಲ್ಲೆಗಳಲ್ಲೂ ಕೊಡಲು ಪ್ರಯತ್ನಿಸುತ್ತೇವೆ. ರೈತರು ಹಸು ಖರೀದಿಸಲು ಸಹಾಯಧನವನ್ನು ನೀಡಲಾಗುತ್ತಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲವಾಗಿದೆ ಎಂದರು.ಈ ಸಂದರ್ಭದಲ್ಲಿ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಪ್ಪ, ರಾಜ್ಯ ಉಪಾಧ್ಯಕ್ಷ ಕಲ್ಲೇಶ್, ಕೆಪಿಸಿಸಿ ಓಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಸುನೀಲ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‌ ಬಾಬು, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್‌ ಬಾಬು, ಕಾಂಗ್ರೆಸ್ ಟಿಕೆಟ್ ಆಕಾoಕ್ಷಿ ಸುಹಾಸ್ ಸುಧಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಮುಖಂಡರಾದ ವೈ.ನಾಗರಾಜ್, ಆಟೋ ಗಿರೀಶ್, ಪುನೀತ್, ಅಶೋಕ್, ಕರಿಯಣ್ಣ, ಕುಮಾರ್, ದಯಾನಂದ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲಾಶ್ರೀ ಉತ್ತಮ ವೇದಿಕೆ: ಜಿಪಂ ಸಿಇಒ
ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ