ದೇಶದ ಕೃಷಿ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ್ದ ಇವರು, ಉತ್ತಮ ಪ್ರಗತಿ ಸಾಧಿಸಿದ ಪರಿಣಾಮ ಇವರನ್ನು, ಹಸಿರು ಕ್ರಾಂತಿಯ ಹರಿಕಾರರೆಂದು ಕರೆಯುತ್ತಾರೆ.
ಹೂವಿನಹಡಗಲಿ: ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ಇವರ ತತ್ವಾದರ್ಶಗಳನ್ನು ಹಾಗೂ ಅವರ ಸರಳ ಜೀವನವನ್ನು ಇಂದಿನ ಯುವ ಜನಾಂಗಕ್ಕೆ ತಲುಪಿಸಿದಾಗ ಅವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ತಾಪಂನ ರಾಜೀವ ಗಾಂಧಿ ಸಭಾಂಗಣದಲ್ಲಿ ತಾಲೂಕ ಆಡಳಿತ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಂ ಅವರ 119ನೇ ಜಯಂತ್ಯುತ್ಸವ ಕಾಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಕೃಷಿ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ್ದ ಇವರು, ಉತ್ತಮ ಪ್ರಗತಿ ಸಾಧಿಸಿದ ಪರಿಣಾಮ ಇವರನ್ನು, ಹಸಿರು ಕ್ರಾಂತಿಯ ಹರಿಕಾರರೆಂದು ಕರೆಯುತ್ತಾರೆ. ಅಸಮಾನತೆ ವಿರುದ್ಧ ಹೋರಾಡಿದ್ದಾರೆ. ಹಿಂದುಳಿದ ಜನಾಂಗದ ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆಯನ್ನು ಹೊಂದುವಂತಾಬೇಕು. ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕೆಂದು ಹೇಳಿದರು.
ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದುಳಿದ ಜನಾಂಗದಲ್ಲಿ ಜನಿಸಿದ ಡಾ.ಬಾಬು ಜಗಜೀವನ ರಾಂ ಇವರು, ಸಮಾಜದಲ್ಲಿನ ಸಂಕೋಲೆಗಳನ್ನು ಕಿತ್ತು ಹಾಕುವ ಮೂಲಕ, ಮನುಷ್ಯರೆಲ್ಲರೂ ಒಂದೇ ಎಂಬ ಭಾವವನ್ನು ಎಲ್ಲರಲ್ಲಿಯೂ ಬಿತ್ತುವ ಕೆಲಸ ಮಾಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಸುಮಾರು 30 ವಷಗಳ ಕಾಲ ಸೇವೆ ಸಲ್ಲಿಸುವ ಮೂಲಕ ದೇಶದ ದೀನ, ದಲಿತ ಧ್ವನಿಯಾಗಿ ಹೋರಾಟ ಮಾಡಿದ್ದಾರೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ, ಒಳಮೀಸಲಾತಿ ಹೋರಾಟ ಸಮಿತಿ ತಾಲೂಕ ಅಧ್ಯಕ್ಷ ಉಚ್ಚೆಂಗೆಪ್ಪ, ಬಿಜೆಪಿ ವಿಭಾಗೀಯ ಸಂಘಟನಾ ಪ್ರಧಾನ ಕಾಯದರ್ಶಿ ಎಚ್.ಪೂಜೆಪ್ಪ ಸೇರಿದಂತೆ ಇತರರು ಮಾತನಾಡಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಕೊಟ್ರಗೌಡ ಇವರು, ಡಾ.ಬಾಬು ಜಗಜೀವನ ರಾಮ್ ಜೀವನ ಚರಿತ್ರೆ ಕುರಿತು ಮಾತನಾಡಿದರು. ಸಿಪಿಐ ಮಲ್ಲಪ್ಪ ಹೂಗಾರ, ಮುಖಂಡರಾದ ವಿಜಯಕುಮಾರ್, ಪಿ.ನಿಂಗಪ್ಪ, ಶ್ರೀಧರನಾಯ್ಕ, ಆನಂದ, ಗೋಣೆಪ್ಪ, ಮುಂಡವಾಡ ಉಮೇಶ್, ಗುಡ್ಡದಯ್ಯ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.