ಹೊಂಗಹಳ್ಳಿ ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

KannadaprabhaNewsNetwork |  
Published : Jul 30, 2024, 12:32 AM IST
ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಬಿ.ಮಹದೇಶ್ವರ ಸ್ವಾಮಿಗೆ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಯನ್ನು ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ್ ನೀಡಿದರು. | Kannada Prabha

ಸಾರಾಂಶ

ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಪಡೆದುಕೊಂಡಿದೆ.

ಗುಂಡ್ಲುಪೇಟೆ: ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಯನ್ನು ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ್ ಶಾಲೆಯ ಮುಖ್ಯ ಶಿಕ್ಷಕ ಬಿ.ಮಹದೇಶ್ವರ ಸ್ವಾಮಿಗೆ ನೀಡಿದರು. ಪ್ರಶಸ್ತಿಯ ಫಲಕ, ನಗದು ₹10,000 ಬಹುಮಾನ, ಶಾಲೆಯ ಮಕ್ಕಳಿಗೆ ಚಾಕ್ಲೆಟ್, ಎಂಟು ಸಾವಿರ ಮೌಲ್ಯದ ಪುಸ್ತಕ, ಶಿಕ್ಷಕರಿಗೆ ದಿನಚರಿ, ಕೈ ಗಡಿಯಾರ ಒಳಗೊಂಡಿದೆ ಎಂದು ಮುಖ್ಯ ಶಿಕ್ಷಕ ಬಿ.ಮಹದೇಶ್ವರಸ್ವಾಮಿ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ