ಸೈದಾಪೂರ ರೈಲ್ವೆ ಮೇಲ್ಸೇತುವೆಗೆ ಗ್ರೀನ್‌ಸಿಗ್ನಲ್‌

KannadaprabhaNewsNetwork |  
Published : Oct 18, 2026, 02:15 AM IST
ಯಾದಗಿರಿ ಜಿಲ್ಲೆಯ ರೈಲ್ವೆ ಬೇಡಿಕೆಗಳ ಕುರಿತು ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ ಅವರು ರೈಲ್ವೆ ಸಚಿವ ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. | Kannada Prabha

ಸಾರಾಂಶ

ಗುರುಮಠಕಲ್ ಕ್ಷೇತ್ರದ ಸೈದಾಪೂರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಗುರುಮಠಕಲ್ ಕ್ಷೇತ್ರದ ಸೈದಾಪೂರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಸೈದಾಪೂರ ಸಹಿತ ಯಾದಗಿರಿ ತಾಲೂಕಿನ ಮುಷ್ಟೂರು, ಮುದ್ನಾಳ ಗ್ರಾಮಗಳಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕಾಗಿ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಫೆ.17 ರಂದು ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿರುವ ಸಚಿವರು ಅ.5 ರಂದು ಪತ್ರ ಬರೆದಿದ್ದು, ಸೈದಾಪೂರ ರೈಲ್ವೆ ಮೇಲ್ಸೇತುವೆ ಮಂಜೂರಾತಿ ನೀಡಲಾಗಿ, ಮುಷ್ಟೂರು ಮತ್ತು ಮುದ್ನಾಳ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದರು.

ಜನರ ಬಹು ವರ್ಷದ ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವುದು ಸಂತೋಷದ ವಿಷಯವಾಗಿದೆ. ಸೈದಾಪೂರ ರೈಲ್ವೆ ಮೇಲ್ಸೇತುವೆ ನಿರ್ಮಾಣವಾದರೆ ಗಂಟೆಗಟ್ಟಲೆ ಲೆವೆಲ್ ಕ್ರಾಸಿಂಗ್ ಬಳಿ ವಾಹನ ಕಾಯುವ ಪರಿಸ್ಥಿತಿ ಇಲ್ಲವಾಗಲಿದ್ದು, ದೇವದುರ್ಗ ಮತ್ತು ವಡಗೇರಾ ತಾಲೂಕುಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದರಿಂದ ಅಲ್ಲಿನ ಜನರಿಗೆ ಆಸರೆಯಾಗಲಿದ್ದು, ಸುತ್ತಮುತ್ತಲಿನ ನೂರಾರು ಹಳ್ಳಿಗಳ ಜನರಿಗೆ, ರೈತರಿಗೆ ಮತ್ತು ವಾಹನ ಸವಾರರಿಗೆ ಆಗುತ್ತಿದ್ದ ತೊಂದರೆ ತಪ್ಪಲಿದೆ ಎಂದು ಶಾಸಕ ಕಂದಕೂರ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಜನರ ಅಭಿವೃದ್ಧಿಗಾಗಿ ಸದಾ ಸ್ಪಂದಿಸುವಲ್ಲಿ ನಿರಂತರವಾಗಿರುವ ಕೇಂದ್ರ ಸಚಿವ ವಿ.ಸೋಮಣ್ಣ ನವರು ಈ ಭಾಗದಲ್ಲಿ ಸದಾ ಒಂದಿಲ್ಲೊಂದು ಸ್ಪಂದನೆ ನೀಡುತ್ತಿದ್ದಾರೆ, ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ವಂದೇ ಭಾರತ್, ರಾಜಧಾನಿ ಸೇರಿದಂತೆ ಹಲವು ರೈಲುಗಳನ್ನು ನಿಲುಗಡೆಗೆ ಸ್ಪಂದಿಸಿದ್ದಾರೆ. ಗುರುಮಠಕಲ್ ಪಟ್ಟಣಕ್ಕೆ ಶಾಶ್ವತ ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ವಂದೇ ಭಾರತ್ ಸ್ಲೀಪರ್ ಹೊಸ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಸೋಮಣ್ಣ ಭರವಸೆ ನೀಡಿದ್ದಾರೆ ಎಂದು ಶರಣಗೌಡ ಕಂದಕೂರ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಜನರ ಸಮಸ್ಯೆಗಳನ್ನು ಕೇಂದ್ರ ಸಚಿವರಾದ ವಿ. ಸೋಮಣ್ಣ ರವರ ಗಮನಕ್ಕೆ ತಂದಾಗ ಹಂತ ಹಂತವಾಗಿ ಪರಿಹರಿಸುವ ಭರವಸೆಯ ಫಲವಾಗಿ ಗುರುಮಠಕಲ್ ಕ್ಷೇತ್ರದ ಸೈದಾಪೂರ, ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅದರ ಜೊತೆಗೆ ಹತ್ತಿಕುಣಿ ಡ್ಯಾಂಗೆ ₹75 ಕೋಟಿ ಅನುದಾನ ಬಿಡುಗಡೆ, ಕಡೆಚೂರು ಬಾಡಿಯಾಳ ರೈಲ್ವೇ ಕೋಚ್ ಕಾರ್ಖಾನೆ ಉನ್ನತಿಕರಣ ಅಭಿವೃದ್ಧಿಗೆ ₹200 ಕೋಟಿ ರೈಲ್ವೆ ಬೋರ್ಡ್ಗೆ ಪ್ರಸ್ತಾವನೆ ಸಲ್ಲಿಸಿರುವುದು ಸಂತೋಷದಾಯವಾಗಿದ್ದು, ಕೇಂದ್ರ ಸಚಿವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ತಿಳಿಸಲಾಗುವುದು. : ಶರಣಗೌಡ ಕಂದಕೂರ ಶಾಸಕರು, ಗುರುಮಠಕಲ್.

-

17ವೈಡಿಆರ್6 : ಯಾದಗಿರಿ ಜಿಲ್ಲೆಯ ರೈಲ್ವೆ ಬೇಡಿಕೆಗಳ ಕುರಿತು ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ ಅವರು ರೈಲ್ವೆ ಸಚಿವ ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

---000---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಧಾರ್ ತಿದ್ದುಪಡಿಗೆ ಅರಸೀಕೆರೆಯಲ್ಲಿ ಪರದಾಟ
ನವರಾತ್ರಿ ಅನ್ನ ಸಂತರ್ಪಣೆಗೆ ಹರಿದು ಬರುತ್ತಿರುವ ಹೊರೆ ಕಾಣಿಕೆ