ಸ್ವಾವಲಂಬಿ ಬದುಕಿಗೆ ಗೃಹಲಕ್ಷ್ಮೀ ಯೋಜನೆ ಸಹಕಾರಿ-ಶೇಖಪ್ಪ ಮಣಕಟ್ಟಿ

KannadaprabhaNewsNetwork |  
Published : Jul 20, 2026, 01:00 AM IST
ಶಿಗ್ಗಾಂವಿ ತಾಲೂಕು ಪಂಚಾಯಿತಿ ಆವರಣದಲ್ಲಿ  ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ನಡೆದ ಗೃಹಲಕ್ಷ್ಮೀ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶೇಖಪ್ಪ ಮಣಕಟ್ಟಿ ಸಸಿಗೆ ನೀರುಣಿಸಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಆರ್ಥಿಕವಾಗಿ ಸ್ವಾವಲಂಬಿಯಾಗಿ ಬದುಕಲು ಗೃಹ ಲಕ್ಷ್ಮೀ ಯೋಜನೆ ಸಹಕಾರಿಯಾಗಿದೆ ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶೇಖಪ್ಪ ಮಣಕಟ್ಟಿ ಹೇಳಿದರು.

ಶಿಗ್ಗಾಂವಿ:ಆರ್ಥಿಕವಾಗಿ ಸ್ವಾವಲಂಬಿಯಾಗಿ ಬದುಕಲು ಗೃಹ ಲಕ್ಷ್ಮೀ ಯೋಜನೆ ಸಹಕಾರಿಯಾಗಿದೆ ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶೇಖಪ್ಪ ಮಣಕಟ್ಟಿ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ನಡೆದ ಗೃಹಲಕ್ಷ್ಮೀ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆ ಜಾರಿಗೆಯಾಗಿ ೩ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿಯೊಂದು ತಾಲೂಕು ಪಂಚಾಯಿತಿ ಹಾಗೂ ಗ್ರಾಮಪಂಚಾಯಿತಿಗಳಲ್ಲಿ ಗೃಹ ಲಕ್ಷ್ಮೀ ದಿನಾಚರಣೆಯನ್ನು ಹಮ್ಮಿಕೊಂಡು ಬೇವಿನ ಮತ್ತು ಅರಳೆ ಮರ ನೆಟ್ಟು ಗಿಡಗಳು ಹೆಮ್ಮರವಾಗಿ ಹೇಗೆ ಬೆಳೆಯುತ್ತವೆ ಹಾಗೆ ಮಹಿಳೆಯರು ಬೆಳೆದು ನಾಲ್ಕು ಜನರಿಗೆ ಉದ್ಯೋಗ ನೀಡುವಂತಾಗಬೇಕು ಎಂದರು.

ತಾಲೂಕಿನಲ್ಲಿ ಒಟ್ಟು ಗ್ಯಾರಂಟಿ ಯೋಜನೆಗಳಲ್ಲಿ ತಾಲೂಕಿನ ಫಲಾನುಭವಿಗಳು ಗೃಹ ಲಕ್ಷ್ಮೀಯಲ್ಲಿ ೪೪೯೬೨, ಗೃಹ ಜ್ಯೋತಿ ಪ್ರತಿ ತಿಂಗಳು ೪೬೩೩೧, ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ೪೫೬೮೪, ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ೨೧೧.೧೪ ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಶಿವಾನಂದ ಸಣ್ಣಕ್ಕಿ, ಸಾಮಾಜಿಕ ಅರಣ್ಯ ಉಪ ವಲಯ ಅರಣ್ಯಅಧಿಕಾರಿ ಶರಣಕುಮಾರ, ಗಸ್ತು ಅರಣ್ಯಪಾಲಕ ಆನಂದ ಅಳಗುಂಡಗಿ, ಗ್ಯಾರಂಟಿ ಸಮಿತಿ ಸದಸ್ಯರಾದ ಶಂಕ್ರಪ್ಪ ಗಂಗಣ್ಣವರ, ಶಣ್ಮುಖಪ್ಪ ಉಳ್ಳಾಗಡ್ಡಿ, ಚಂದ್ರಶೇಖರ ಮನೋಜ, ಶಂಕ್ರಪ್ಪ ಬಸರೀಕಟ್ಟಿ, ಡಿ.ಆರ್. ಬೊಮ್ಮನಹಳ್ಳಿ, ಬಸವರಾಜ ಹಾದಿಮನಿ , ಭಾರತೀ, ಸುರೇಶ ತೆಗ್ಗಿಹಳ್ಳಿ, ರಾಯಪ್ಪ, ಸಂಜೀವ ಕುಮಾರ ಬೆಳವತ್ತಿ, ಬಸವಣ್ಯೆಯ್ಯ ಪೂಜಾರ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಶ್ವತ ನಿವಾಸಿ ಪತ್ರ ಆತಂಕಕಾರಿ: ಅಶೋಕ್‌
ಮೋದಿ ದುರ್ಬಲ, ದುಷ್ಟರಕ್ಷಕ ಪ್ರಧಾನಿ: ಸಿದ್ದು ಕಿಡಿ