ಚನ್ನಪಟ್ಟಣ ನಗರಸಭಾ ನೂತನ ಕಟ್ಟಡಕ್ಕೆ ಭೂಮಿಪೂಜೆ

KannadaprabhaNewsNetwork |  
Published : Mar 04, 2025, 12:35 AM IST
ಪೋಟೊ೩ಸಿಪಿಟಿ೪: ನಗರದ ನೂತನ ನಗರಸಭಾ ಕಟ್ಟಡ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸಲು ನೂತನ ನಗರಸಭೆ ಕಟ್ಟಡ ನಿರ್ಮಿಸುತ್ತಿದ್ದು, ವರ್ಷದೊಳಗೆ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕರ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಚನ್ನಪಟ್ಟಣ: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸಲು ನೂತನ ನಗರಸಭೆ ಕಟ್ಟಡ ನಿರ್ಮಿಸುತ್ತಿದ್ದು, ವರ್ಷದೊಳಗೆ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕರ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನೂತನ ನಗರಸಭಾ ಕಟ್ಟಡ ಕಾಮಗಾರಿಗೆ ಸೋಮವಾರ ಭೂಮಿಪೂಜೆ ಮಾಡಿ ಮಾತನಾಡಿದ ಅವರು, ಹಿಂದಿನ ಅವಧಿಯಲ್ಲೆ ನಗರಸಭೆ ನೂತನ ಕಟ್ಟಡ ಕಾಮಗಾರಿ ಪ್ರಾರಂಭವಾಗಬೇಕಿತ್ತು. ಆದರೆ ಅನುದಾನ ಸಿಗದ ಕಾರಣ ಚಾಲನೆ ಸಿಕ್ಕಿರಲಿಲ್ಲ, ಇದೀಗ ರಾಜ್ಯ ಸರಕಾರ ವಿಶೇಷ ಅನುದಾನ ನೀಡಿರುವ ಕಾರಣ ಸುಸಜ್ಜಿತವಾದ ಕಟ್ಟಡ ವರ್ಷದೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.

ನಗರದ ಹೃದಯ ಭಾಗದಲ್ಲಿರುವ ನಗರಸಭೆಗೆ ಸುಸಜ್ಜಿತ ಕಟ್ಟಡದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಹೊಸ ಕಟ್ಟಡ ಕಾಮಗಾರಿಗೆ ಹಣ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಎಲ್ಲಾ ಸದಸ್ಯರು, ಅಧಿಕಾರಿ ವರ್ಗ, ಸಿಬ್ಬಂದಿಗಳ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ದಿನ ಕಳೆದಂತೆ ನಗರವ್ಯಾಪ್ತಿ ವಿಸ್ತಾರಗೊಳ್ಳುತ್ತಿದ್ದು, ಇದರಿಂದ ಕೆಲಸ ಕಾರ್ಯಗಳು ಸಹ ಹೆಚ್ಚುತ್ತಿವೆ. ಜೊತೆಗೆ ಹಳೆಯ ಕಟ್ಟಡದಲ್ಲಿ ಪಾರ್ಕಿಂಗ್ ಸಮಸ್ಯೆ, ಕೊಠಡಿ ಸಮಸ್ಯೆಗಳಿದ್ದು, ಈ ಎಲ್ಲಾ ಕಾರಣಗಳಿಂದ ಹೊಸ ಕಟ್ಟಡ ಕಾಮಗಾರಿ ಕೈಗೆತ್ತಿಕೊಂಡಿರುವುದಾಗಿ ಹೇಳಿದರು.

ರಾಜ್ಯ ಸರ್ಕಾರ ವಿಶೇಷ ಅನುದಾನದಡಿ ನಿರ್ಮಾಣಗೊಳ್ಳುತ್ತಿರುವ ನಗರಸಭಾ ಕಟ್ಟಡ ನಿರ್ಮಾಣಕ್ಕೆಂದು ೧೦ ಕೋಟಿ ಹಣ ಮೀಸಲಿಟ್ಟಿದ್ದು, ಮೊದಲ ಹಂತದಲ್ಲಿ ೫ ಕೋಟಿ, 2ನೇ ಹಂತದಲ್ಲಿ ೫ ಕೋಟಿ ಹಣ ಬಿಡುಗಡೆಯಾಗಲಿದೆ. ಕೆಳ ಅಂತಸ್ತಿನಲ್ಲಿ ವಾಹನಗಳ ಪಾರ್ಕಿಂಗ್, ಮೊದಲ ಹಾಗೂ ಎರಡನೇ ಅಂತಸ್ತಿನಲ್ಲಿ ಕಚೇರಿಗಳು ಕಾರ್ಯ ನಿರ್ವಹಿಸಲಿವೆ ಎಂದು ಮಾಹಿತಿ ನೀಡಿದರು.

ಈ ವೇಳೆ ಪೌರಾಯುಕ್ತ ಮಹೇಂದ್ರ ಕುಮಾರ್, ನಗರಸಭಾ ಅಧ್ಯಕ್ಷ ವಾಸಿಲ್ ಆಲಿಖಾನ್, ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಸದಸ್ಯರಾದ ಕೋಟೆ ಚಂದ್ರು, ಮಂಗಳಮ್ಮ, ಜಯಮಾಲಾ, ಕೋಟೆ ನಾಗೇಶ್, ಸುಮಾ ರವೀಶ್, ಸತೀಶ್ ಬಾಬು, ವಿವೇಕ್, ವೆಂಕಟೇಶ್‌ ಇತರರು ಹಾಜರಿದ್ದರು.

ಪೋಟೊ೩ಸಿಪಿಟಿ೪: ಚನ್ನಪಟ್ಟಣದ ನೂತನ ನಗರಸಭಾ ಕಟ್ಟಡ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು