ಕಡಿಮೆ ನೀರಿನಲ್ಲಿ ಹೆಚ್ಚು ಫಸಲು ಬೆಳೆಯಬೇಕು

KannadaprabhaNewsNetwork |  
Published : Oct 26, 2024, 01:05 AM IST
೨೫ಕೆಎಲ್‌ಆರ್-೫ಕೋಲಾರದ ಟಮಕಾ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸ್ ರಾಜು ಸಹಿ ಫಸಲ್ ಕುರಿತ ತರಬೇತಿ ಕೈಪಿಡಿ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಕೋಲಾರ ಜಿಲ್ಲೆಯಲ್ಲಿ ಅಂತರ್ಜಲವನ್ನು ಹೆಚ್ಚಿಸಲು ಹಾಗೂ ಕಡಿಮೆ ನೀರನ್ನು ಬಳಸಿ ಹೆಚ್ಚು ಫಸಲನ್ನು ತೆಗೆಯುವ ಕುರಿತಾದ "ಸಹಿ ಫಸಲ್ " ಕಾರ್ಯಾಗಾರ ರೈತರು ಸದುಪಯೋಗಪಡಿಸಿಕೊಳ್ಳಬೇಕು, ಅಂತರ್ಜಲ ಅತಿ ಬಳಕೆಯಾಗುವ ಪ್ರದೇಶಗಳಲ್ಲಿ ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲದ ಅತಿ ಬಳಕೆ ಕಡಿಮೆ ಮಾಡುವುದು

ಕನ್ನಡಪ್ರಭ ವಾರ್ತೆ ಕೋಲಾರದೇಶ ಮತ್ತು ರಾಜ್ಯದಲ್ಲಿ ಅಂತರ್ಜಲ ಮಟ್ಟವನ್ನು ಅಧ್ಯಯನ ಮಾಡಿ, ಅಂತರ್ಜಲ ಕುಸಿದ ರಾಜ್ಯಗಳಲ್ಲಿ ಅಂತರ್ಜಲವನ್ನು ಹೆಚ್ಚಿಸಲು ಅಟಲ್ ಭೂಜಲ್ ಯೋಜನೆ ಹಾಗೂ ಸಹಿ ಫಸಲ್-ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಿಸುವ ಯೋಜನೆಗಳನ್ನು ೨೦೨೦-೨೦೨೫ ವರ್ಷಗಳಲ್ಲಿ ಜಾರಿಗೊಳಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸ್ ರಾಜು ಹೇಳಿದರು. ನಗರದ ಹೊರವಲಯದ ಟಮಕಾ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ, ಜಲ ಶಕ್ತಿ ಸಚಿವಾಲಯ ಜಲಸಂಪನ್ಮೂಲ, ನದಿ ಅಭಿವೃದ್ದಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆ, ಭಾರತ ಸರ್ಕಾರ, ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕ, ಕರ್ನಾಟಕ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ಕೃಷಿ ವಿಜ್ಞಾನ ಕೇಂದ್ರದಿಂದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ

ಕೋಲಾರ ಜಿಲ್ಲೆಯಲ್ಲಿ ಅಂತರ್ಜಲವನ್ನು ಹೆಚ್ಚಿಸಲು ಹಾಗೂ ಕಡಿಮೆ ನೀರನ್ನು ಬಳಸಿ ಹೆಚ್ಚು ಫಸಲನ್ನು ತೆಗೆಯುವ ಕುರಿತಾದ "ಸಹಿ ಫಸಲ್ " ಕಾರ್ಯಾಗಾರ ರೈತರು ಸದುಪಯೋಗಪಡಿಸಿಕೊಳ್ಳಬೇಕು, ಅಂತರ್ಜಲ ಅತಿ ಬಳಕೆಯಾಗುವ ಪ್ರದೇಶಗಳಲ್ಲಿ ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲದ ಅತಿ ಬಳಕೆ ಕಡಿಮೆ ಮಾಡುವುದು, ಅಂತರ್ಜಲದ ಸುಸ್ಥಿರ ನಿರ್ವಹಣೆ ಹಾಗೂ ಸುಧಾರಣೆಗೆ ಪೂರಕ ಉಪಕ್ರಮಗಳನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರವು ಅಟಲ್ ಭೂಜಲ ಯೋಜನೆ ಜಾರಿಗೆ ತಂದಿದೆ ಎಂದರು. ದೇಶದಲ್ಲಿ ಸುಮಾರು ಏಳು ರಾಜ್ಯಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಅದರಲ್ಲಿ ಕರ್ನಾಟಕ ಸಹ ಒಂದಾಗಿದೆ. ಕರ್ನಾಟಕದಲ್ಲಿ ೧೪ ಜಿಲ್ಲೆ, ೪೧ ತಾಲ್ಲೂಕು, ೧೧೯೯ ಗ್ರಾಮಗಳಲ್ಲಿ ಅಂತರ್ಜಲ ಮಟ್ಟವು ಕುಸಿದಿದೆ ಎಂದು ಅಧ್ಯಯನಗಳು ತಿಳಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಸುಮಾರು ೬೪೨ ಕೋಟಿಗಳಷ್ಟು ಅನುದಾನ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದೆ. ಈಗಾಗಲೇ ೧೫೦೦ ಕೋಟಿ ಈ ಉದ್ದೇಶಕ್ಕಾಗಿ ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಅಂತರ್ಜಲ ಹೆಚ್ಚಿಸಬೇಕು

ಬಿದ್ದ ಮಳೆ ನೀರನ್ನು ಬಿದ್ದಲ್ಲಿಯೇ ಇಂಗುವಂತೆ ಮಾಡುವುದು, ಸ್ಥಳದಲ್ಲೇ ಮಳೆನೀರು ಕೋಯ್ಲು ವಿಧಾನಗಳ ಮಾಡಿಸುವುದು. ಬದುಗಳ ನಿರ್ಮಾಣ, ಅಂತರ ಬದು ನಿರ್ವಹಣಾ ವಿಧಾನಗಳು ಇಂಗು ಗುಂಡಿಗಳನ್ನು ನಿರ್ಮಿಸುವ ಮೂಲಕ ಹಾಗೂ ಅಂತರ್ಜಲ ನಿರ್ವಹಣೆಯಲ್ಲಿ ಸಮುದಾಯದ ಪಾತ್ರ ಬಹುಮುಖ್ಯವಾದದ್ದು ಮತ್ತು ನೀರನ್ನು ಮಿತವಾಗಿ ಬಳಕೆ ಮಾಡಬೇಕು ಎಂದರು. ಕೋಲಾರದಲ್ಲಿ ಹಾಲು ತರಕಾರಿ ಬೆಳೆಯುವ ರೈತರಿಗೆ ಹಾಗೂ ಕೃಷಿಕರಿಗೆ ಉತ್ತಮ ವಾತಾವರಣ ಇದೆ. ಅದೇರೀತಿ ಅಂತರ್ಜಲ ಮಟ್ಟ ಕುಸಿಯದಂತೆ ನೋಡಿಕೊಳ್ಳುವ ಹಾಗೂ ಪರಿಸ್ಥಿತಿಗಳನ್ನು ಸುಧಾರಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಕೆಸಿ ವ್ಯಾಲಿಯಿಂದ ಅನುಕೂಲ

ಉಪ ಕುಲಪತಿ ಡಾ.ವಿಷ್ಣುವರ್ಧನ್ ಮಾತನಾಡಿ ಕೋಲಾರದಲ್ಲಿ ಅಂತರ್ಜಲ ಮಟ್ಟವು ಕುಸಿದಿದ್ದು, ಕೆ.ಸಿ ವ್ಯಾಲಿ ನೀರು ಬಂದಿರುವುದರಿಂದ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ನೀರನ್ನು ಒದಗಿಸಬೇಕು ಹಾಗೂ ಕೃಷಿ ಬಳಕೆಗೆ ನೀರನ್ನು ಒದಗಿಸಬೇಕು. ಕೃಷಿಯಲ್ಲಿ ಹೆಚ್ಚು ನೀರನ್ನು ಬಳಸಿಕೊಂಡು ಬೆಳೆಯುವ ಭತ್ತ, ಕಬ್ಬು ನಂತಹ ಬೆಳೆಗಳನ್ನು ಕಡಿಮೆಮಾಡಿ, ಕಡಿಮೆ ನೀರನ್ನು ಬಳಸಿಕೊಂಡು ಹೆಚ್ಚು ಬೆಳೆಯುವ ಬೆಳೆಗಳ ಬಗ್ಗೆ ರೈತರು ಹೆಚ್ಚು ಗಮನ ನೀಡಬೇಕು ಎಂದರು.ಜಿಲ್ಲಾಧಿಕಾರಿ ಅಕ್ರಂ ಪಾಷ, ರಾಷ್ತ್ರೀಯ ಜಲ ಮಿಷನ್ ನಿರ್ದೇಶಕ ಅಶೋಕ್.ಕೆ.ಜೆ., ಉಪನಿರ್ದೇಶಕ ಸಂತೋಷ್, ಸರ್ಕಾರದ ಕಾರ್ಯದರ್ಶಿ ಹಾಗೂ ಅತಲ್ ಭೂಜಲ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಯೋಜನಾ ಸಂಯೋಜಕರು ರಾಘವನ್, ಯೋಜನಾ ನಿರ್ದೇಶಕರಾದ ಕಿರರ್ಣ ಮಸೂತಿ ಡಾಶಿವಾಣಂದ ವಿ ಹೊಂಗಲ್, ಡಾ,ವೆಂಕಟೇಶಲು, ಜಂಟಿ ಕೃಷಿ ನಿರ್ದೇಶಕಿ ಸುಮಾ, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!