ಕೃಷಿ ಅಭಿವೃದ್ಧಿಯಿಂದ ಎಲ್ಲ ಕ್ಷೇತ್ರಗಳ ಬೆಳವಣಿಗೆ: ಬಸವರಾಜ ಅರಬಗೊಂಡ

KannadaprabhaNewsNetwork | Published : May 21, 2025 12:01 AM
ಪಟ್ಟಣದ ರೇಣುಕಾಚಾರ್ಯ ಬ್ಯಾಂಕಿನ ಆವರಣದಲ್ಲಿ ಇತ್ತೀಚೆಗೆ ನಡೆದ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರ ನಡೆಯಿತು.
Follow Us

ಶಿಗ್ಗಾಂವಿ: ಕೃಷಿ ಕ್ಷೇತ್ರ ಅಭಿವೃದ್ಧಿಯಾದರೆ ಮಾತ್ರ ಇತರ ಎಲ್ಲ ಕ್ಷೇತ್ರಗಳು ಸಂಪೂರ್ಣವಾಗಿ ಬೆಳೆಯಲು ಸಾಧ್ಯ. ಎಲ್ಲ ಕ್ಷೇತ್ರಗಳು ಕೃಷಿ ಕ್ಷೇತ್ರವನ್ನು ಅವಲಂಬಿಸಿವೆ ಎಂದು ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿ ನಿರ್ದೇಶಕ ಬಸವರಾಜ ಅರಬಗೊಂಡ ತಿಳಿಸಿದರು.ಪಟ್ಟಣದ ರೇಣುಕಾಚಾರ್ಯ ಬ್ಯಾಂಕಿನ ಆವರಣದಲ್ಲಿ ಇತ್ತೀಚೆಗೆ ನಡೆದ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಶಿವಾನಂದ ಸಂಗಾಪೂರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಿಶೀಮಗೌಡ ಪಾಟೀಲ, ಧಾರವಾಡ ಕೆಸಿಸಿ ಬ್ಯಾಂಕ್ ನಿರ್ದೇಶಕ ಸಂಗಮೇಶ ಕಂಬಾಳಿಮಠ, ಜಿಲ್ಲಾ ಸಹಕಾರಿ ಯುನಿಯನ್ ನಿರ್ದೇಶಕ ಶಿವಾನಂದ ರಾಮಗೇರಿ, ರೇಣುಕಾಚಾರ್ಯ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಸ್. ಅರಳೆಲೆಮಠ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಎಸ್.ಜಿ. ಸುಣಗಾರ, ಕೆಸಿಸಿ ಬ್ಯಾಂಕ್ ವ್ಯವಸ್ಥಾಪಕ ವಿ.ಡಿ. ಚಿಕ್ಕನಗೌಡ್ರ, ಬಿ.ಎ. ಲಾಳಗೆ, ಶಿವರಾಜ ರಾಯಣ್ಣವರ, ರವಿ ಕಳ್ಳಿಮನಿ, ಸವಿತಾ ಹಿರೇಮಠ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ, ತಾಲೂಕಿನ ಎಲ್ಲ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹಕರು ಇದ್ದರು.ಸಮೀಕ್ಷೆ ಅವಧಿ ೨೮ರ ವರೆಗೆ ವಿಸ್ತರಣೆ

ಹಾವೇರಿ: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣ- ೨೦೨೫ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ಕಾರ್ಯವನ್ನು ಮೇ ೨೮ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ತಿಳಿಸಿದ್ದಾರೆ.

ಸಮೀಕ್ಷಾದಾರರಿಂದ ಮನೆ ಮನೆ ಭೇಟಿ ಸಮೀಕ್ಷೆ ಮೇ ೨೫ರ ವರೆಗೆ ವಿಸ್ತರಿಸಲಾಗಿದೆ. ಮನೆ ಮನೆಯ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿ ಒದಗಿಸದೇ ಇದ್ದಲ್ಲಿ ಮೇ ೨೬, ೨೭ ಹಾಗೂ ೨೮ರಂದು ವಿಶೇಷ ಶಿಬಿರಗಳಲ್ಲಿ ಮಾಹಿತಿ ನೀಡಲು ಅವಕಾಶವಿದೆ. ನಿಮ್ಮ ವ್ಯಾಪ್ತಿಯ ಮತಗಟ್ಟೆಯಲ್ಲಿ ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್‌ನೊಂದಿಗೆ ಮಾಹಿತಿ ನೀಡಬೇಕು.ಆನ್‌ಲೈನ್ ಸಮೀಕ್ಷೆ: ಮನೆ ಮನೆಯ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿ ನೀಡದವರು ನೇರವಾಗಿ ಆನ್‌ಲೈನ್ ಸಮೀಕ್ಷೆಗೆ ಸಹಕರಿಸಿ, ನಿಖರವಾದ ಮಾಹಿತಿ ನೀಡಬೇಕು ಹಾಗೂ ನ್ಯಾಯಯುತ ಮೀಸಲಾತಿ ಹಂಚಿಕೆಗಾಗಿ ಸಮೀಕ್ಷಾದಾರರಿಗೆ ಪರಿಶಿಷ್ಟ ಜಾತಿಗೆ ಸೇರಿದವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನತರ ನಿಖರ ಮಾಹಿತಿ ನೀಡಬೇಕು. ಸಹಾಯವಾಣಿ ೯೪೮೧೩೫೯೦೦೦ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.