ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫಲಾನುಭವಿಗಳು ಮೃತಪಟ್ಟ ಬಳಿಕವೂ ಅವರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಪ್ರಕರಣಗಳನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರದ ಹಣ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಹಾಗೂ ಇಲಾಖೆಗಳ ಸಮನ್ವಯಕ್ಕೆ ಆದ್ಯತೆ ನೀಡಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಶಕ್ತಿ ಯೋಜನೆ ಕುರಿತು ಚರ್ಚೆ ನಡೆದಿದ್ದು, ದಿಬ್ಬೂರಹಳ್ಳಿ ಮಾರ್ಗದಲ್ಲಿ ಬಸ್‌ಗಳ ಕೊರತೆ ಇರುವ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ತಾಲೂಕಿನಲ್ಲಿ ಪ್ರಸ್ತುತ 50 ಬಸ್‌ಗಳು ಸಂಚರಿಸುತ್ತಿದ್ದು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಇನ್ನೂ 10 ಬಸ್‌ಗಳ ಅಗತ್ಯವಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ಜಗದೀಶ್ ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ. ಮುನಿಯಪ್ಪ, ತಾಪಂ ಇಒ ಹೇಮಾವತಿ ಆರ್., ತಾಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ಬೆಸ್ಕಾಂ ಅಧಿಕಾರಿ ಪ್ರಭು, ಆಹಾರ ಇಲಾಖೆ ಅಧಿಕಾರಿ ವೆಂಕಟಲಕ್ಷ್ಮಮ್ಮ, ಕೆಎಸ್‌ಆರ್‌ಟಿಸಿ ಅಧಿಕಾರಿ ಜಗದೀಶ್ ಸೇರಿದಂತೆ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.