ಪುತ್ತೂರು: ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ

KannadaprabhaNewsNetwork |  
Published : Nov 13, 2026, 02:45 AM IST
ಫೋಟೋ: 11ಪಿಟಿಆರ್-ಸಭೆ ಪುತ್ತೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಪುತ್ತೂರು ತಾ.ಪಂ.ನಲ್ಲಿರುವ ಅನುಷ್ಠಾನ ಸಮಿತಿ ಕಚೇರಿಯಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಗೃಹಜ್ಯೋತಿ ಯೋಜನೆಯ ಪರಿಶೀಲನಾ ಕಾರ್ಯ

ಪುತ್ತೂರು: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರಿಶೀಲನೆಯ ಕಾರ್ಯ ರಾಜ್ಯದಲ್ಲಿ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. ಇದಕ್ಕಾಗಿ ಪುತ್ತೂರಿನಲ್ಲಿ 180 ಮಂದಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಹಂತದಲ್ಲಿ ತರಬೇತಿ ಕಾರ್ಯ ಪೂರ್ಣಗೊಂಡಿದೆ. ಸಮೀಕ್ಷೆಯ ಸಂದರ್ಭದಲ್ಲಿ ಯಾವುದೇ ಅರ್ಹ ಫಲಾನುಭವಿಗಳಿಗೆ ಯೋಜನೆ ತಪ್ಪಿ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಪುತ್ತೂರು ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಹೇಳಿದರು.ಅವರು ಬುಧವಾರ ಪುತ್ತೂರು ತಾ.ಪಂ.ನಲ್ಲಿರುವ ಅನುಷ್ಠಾನ ಸಮಿತಿ ಕಚೇರಿಯಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಗೃಹಜ್ಯೋತಿ ಯೋಜನೆಯ ಪರಿಶೀಲನಾ ಕಾರ್ಯ ನಡೆದಿದ್ದು, ಅನ್ನಭಾಗ್ಯಕ್ಕೆ ಸಂಬಂಧಿಸಿ ಪಡಿತರ ಚೀಟಿಯ ಇ-ಕೆವೈಸಿ ಕಾರ್ಯ ನಡೆಯುತ್ತಿದೆ. ಮುಂದೆ ಗೃಹಲಕ್ಷ್ಮೀ ಯೋಜನೆಯ ಪರಿಶೀಲನೆ ಆರಂಭಗೊಳ್ಳಲಿದ್ದು, ಇದರಿಂದ ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

ಮುಂದಿನ ದಿನಗಳಲ್ಲಿ ಗ್ರಾ.ಪಂ.ಮಟ್ಟದಲ್ಲಿ 6 ಮಂದಿಯ ಗ್ಯಾರಂಟಿ ಸಮಿತಿ ಕೂಡ ಅನುಷ್ಠಾನಗೊಳ್ಳಲಿದೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಈ ತನಕ ಫಲಾನುಭವಿಗಳಿಗೆ ಒಟ್ಟು 33 ಕಂತುಗಳ ಹಣ ಬಂದಿದ್ದು, ಆಗಸ್ಟ್, ಸಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಹಣ ಸರಕಾರದಿಂದ ಬಿಡುಗಡೆಯಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಪ್ರಕ್ರಿಯೆ ಆರಂಭಗೊಳ್ಳುತ್ತದೆ ಎಂದರು.

ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿ ಪುತ್ತೂರಿನ 60 ಸಾವಿರ ಫಲಾನುಭವಿಗಳ ಪೈಕಿ 90 ಶೇ.ದಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ಪರಿಶೀಲನೆ ಬಾಕಿ ಇರುವ ಪುತ್ತೂರಿನ ಮೆಸ್ಕಾಂ ಪ್ರತಿ ಉಪವಿಭಾಗದ ಮಟ್ಟದ ಪಟ್ಟಿಯನ್ನು ನೀಡುವಂತೆ ಅಧ್ಯಕ್ಷರು ಮೆಸ್ಕಾಂ ಎಇಇ ರಾಜೇಶ್ ಅವರಿಗೆ ಸೂಚಿಸಿದರು.ತಾಲೂಕಿನ ಹಿರೇಬಂಡಾಡಿ ನ್ಯಾಯ ಬೆಲೆ ಅಂಗಡಿಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಅಧಿಕಾರಿಗಳು ಅದರ ಕುರಿತು ಗಮನಹರಿಸಬೇಕು ಎಂದು ಅನುಷ್ಠಾನ ಸಮಿತಿ ಸದಸ್ಯ ಸೇಸಪ್ಪ ನೆಕ್ಕಿಲು ಅವರು ಒತ್ತಾಯಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧ್ಯಕ್ಷರು ಆಹಾರ ಇಲಾಖೆಯ ಅಧಿಕಾರಿ ಸರಸ್ವತಿ ಅವರಿಗೆ ಸೂಚಿಸಿದರು.

ಕಟ್ಟಡ ಶಿಥಿಲಗೊಂಡಿದ್ದರೆ ಅದನ್ನು ದುರಸ್ತಿ ಮಾಡುವ ಕಾರ್ಯವನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯವರೇ ಮಾಡಬೇಕಾಗುತ್ತದೆ. ದುರಸ್ತಿಯನ್ನು ಇಲಾಖೆ ಮಾಡುವುದಕ್ಕೆ ಆಗುವುದಿಲ್ಲ, ಶಿಥಿಲವಿದ್ದರೆ ನೋಟಿಸ್ ಕೊಡುವ ಕಾರ್ಯವನ್ನು ಇಲಾಖೆ ಮಾಡಬೇಕು. ಪ್ರತಿ ನ್ಯಾಯ ಬೆಲೆ ಅಂಗಡಿಗಳ ಸ್ಥಿತಿಯನ್ನು ಪರಿಶೀಲನೆ ನಡುವಂತೆ ತಾನು ಆರಂಭದಿಂದಲೂ ಅಧಿಕಾರಿಗಳಿಗೆ ಸೂಚಿಸುತ್ತಿದ್ದೇವೆ. ಅಕ್ಕಿ ಲೋಡ್ ಬರುವ ಸಂದರ್ಭದಲ್ಲಿ ಅದು ನೆಲಕ್ಕೆ ಬೀಳದಂತೆ ಎಚ್ಚರಿಕೆ ವಹಿಸಬೇಕು. ಜತೆಗೆ ಬಿದ್ದ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಣೆ ಮಾಡದಂತೆ ಪರಿಶೀಲಿಸುವಂತೆ ಪ್ರತಿ ಬಾರಿಯೂ ಹೇಳಲಾಗುತ್ತಿದೆ ಎಂದು ಅಧ್ಯಕ್ಷರು ವಿವರಿಸಿದರು.

ಸಭೆಯಲ್ಲಿ ಪುತ್ತೂರು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಅನುಷ್ಠಾನ ಸಮಿತಿ ಸದಸ್ಯರು, ಪುತ್ತೂರು ಕೆಎಆರ್‌ಟಿಸಿ ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌