ಮಂಗಳೂರು: ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವಿಜ್ಞಾನ ಹಬ್ಬ ‘ಗ್ಸೇವಿಕಾನ್ 2025’ ಬುಧವಾರ ವಿವಿಯ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಿತು.
ವಿಜ್ಞಾನ ಹಬ್ಬದ ಉದ್ಘಾಟನೆಯನ್ನು ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಎನ್ಐಟಿಕೆ ಸುರತ್ಕಲ್‌ನ ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ರಾಮಚಂದ್ರ ಭಟ್ ನೆರವೇರಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ, ವಿಜ್ಞಾನವನ್ನು ರಚನಾತ್ಮಕ ಕಾರ್ಯಗಳಿಗೆ ಬಳಸಿ ಶಾಂತಿ, ಸೌಹಾರ್ದತೆಯ ಮೌಲ್ಯಗಳಿಗೆ ಬೆಲೆ ನೀಡಬೇಕೆಂದು ಕರೆ ನೀಡಿದರು.ಸದ್ಯದಲ್ಲೇ ನಿವೃತ್ತಿಯಾಗಲಿರುವ ಕ್ಸೇವಿಯರ್ ಬ್ಲಾಕ್‌ನ ನಿರ್ದೇಶಕ ಡಾ. ಈಶ್ವರ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ಸಂಯೋಜಕ ಗ್ಲೇವಿನ್ ಡಿಸೋಜ ಸ್ವಾಗತಿಸಿದರು. ಕುಲಸಚಿವ ಡಾ. ಆಲ್ವಿನ್ ಡೇಸಾ, ಡಾ. ರೊನಾಲ್ಡ್ ನಜರೆತ್, ವಿಜ್ಞಾನ ವಿಭಾಗದ ಡೀನ್ ಡಾ. ಅರುಣ ಕಲ್ಕೂರ್, ಸಹಸಂಯೋಜಕಿ ಶರ್ಲಿ ಅಂದ್ರಾದೆ, ವಿದ್ಯಾರ್ಥಿ ಸಂಯೋಜಕ ನಿಖಿಲ್ ಮತ್ತು ಪ್ರಾಪ್ತಿ ಇದ್ದರು.