ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್

KannadaprabhaNewsNetwork |  
Published : Sep 06, 2025, 01:01 AM IST
ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ಜಿಎಸ್ಟಿ ಇಳಿಕೆಯಿಂದಾಗಿ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೆ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅಮೆರಿಕದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದೆ. ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28 ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದೆ. ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಾಪುರ ಸೋಮವಾರಪೇಟೆ ಹೋಬಳಿ ಕೇಂದ್ರದಿಂದ ಬೇರ್ಪಡಿಸಿ
ಸಮಾನತೆ ಸಾರಿದ ಮಡಿವಾಳ ಮಾಚಿದೇವ