ಕನ್ನಡಪ್ರಭ ವಾರ್ತೆ ತುಮಕೂರು
ಕೇಂದ್ರ ಸರ್ಕಾರ ಜಾರಿಗೆತರಲು ಉದ್ದೇಶಿಸಿರುವ ಜಿಎಸ್‌ಟಿ ದರ ಪರಿಷ್ಕರಣೆಯ ಜಿಎಸ್‌ಟಿ- 2.0 ಸುಧಾರಣೆಗಳು-2025 ವಿಷಯವಾಗಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಈ ತಿಂಗಳ 17ರಂದು ನಗರದಲ್ಲಿ ವಿಚಾರ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದೆ.ಭಾನುವಾರ ಸಂಸ್ಥೆಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಅಧ್ಯಕ್ಷ ಪಾಂಡುರಂಗ ಕುರಂದವಾಡ , ತೆರಿಗೆ ದರ ಪರಿಷ್ಕರಣೆಯ ಅನುಕೂಲಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಹಾಗೂ ಅವರ ಅಭಿಪ್ರಾಯ ಪಡೆಯುವ 17 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಅರ್ಬನ್ ರೆಸಾಟ್ರ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ 25 ವರ್ಷ ತುಂಬಿರುವದರಿಂದ ಬೆಳ್ಳಿ ಹಬ್ಬ ಆಚರಣೆಯ ಲೋಗೋವನ್ನುಅನಾವರಣ ಮಾಡುವರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ ಭಾಗವಹಿಸುವರು. ಜಿಲ್ಲೆಯ ಎಲ್ಲಾ ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಜನಸಾಮಾನ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಕಾರ್ಯಕಾರಿ ಮಂಡಳಿ ಸದಸ್ಯರು, ಚಾರ್ಟೆಡ್ ಅಕೌಂಟೆಂಟ್ ಗಳು, ಲೆಕ್ಕಪರಿಶೋಧಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದರು.
ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಲು ಜಿಎಸ್‌ಟಿ ದರ ಪರಿಷ್ಕರಣೆ ಮಾಡಿರುವ ಕೇಂದ್ರ ಸರ್ಕಾರದ ನೀತಿಯಿಂದ ಎಲ್ಲಾ ವರ್ಗದವರಿಗೂ ಪ್ರಯೋಜನ ಆಗಲಿದ್ದು, ಗ್ರಾಹಕರ ಖರೀದಿ ಸಾಮರ್ಥ್ಯ ಹೆಚ್ಚಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಮೂಲಕ ದೇಶದಲ್ಲಿ ಜನರ ಪರವಾದ ಆರ್ಥಿಕ ಕ್ರಾಂತಿ ಸಾಧ್ಯವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಸಂಜಯ್, ಪ್ರಧಾನ ಕಾರ್ಯದರ್ಶಿ ಶ್ರೀಕಂಠಸ್ವಾಮಿ, ಖಜಾಂಚಿ ರವಿಕರ್, ನಿಕಟ ಪೂರ್ವ ಅಧ್ಯಕ್ಷ ಟಿ.ಜೆ.ಗಿರೀಶ್, ಮಾಜಿ ಅಧ್ಯಕ್ಷ ಸುಜ್ಞಾನ್ ಹಿರೇಮಠ್, ನಿರ್ದೇಶಕರಾದ ಆಶಿದ್, ಟಿ.ಆರ್.ಆನಂದ್ ಮೊದಲಾದವರು ಭಾಗವಹಿಸಿದ್ದರು.