ಚನ್ನಪಟ್ಟಣ: ಸರ್ಕಾರ ಗ್ಯಾರಂಟಿ ಕೊಡುತ್ತದೆ ಆದರೆ, ರೈತರಿಗೆ ಬೆಳೆ ಗ್ಯಾರಂಟಿ ಇಲ್ಲವಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಸ್ಥಳೀಯ ಶಾಸಕರು ಅಸಹಾಯಕರಾಗಿದ್ದಾರೆ. ಅರಣ್ಯ ಸಚಿವರನ್ನು ಇಲ್ಲಿಗೆ ಕರೆತರುವ ಕೆಲಸ ಆಗಿಲ್ಲ. ಈ ಜಿಲ್ಲೆಯನ್ನು ಸ್ವತಃ ಉಪ ಮುಖ್ಯಮಂತ್ರಿಗಳೇ ಪ್ರತಿನಿಧಿಸುತ್ತಿದ್ದರೂ ರೈತರಿಗೆ ರಕ್ಷಣೆ ಸಿಕ್ಕಿಲ್ಲ. ಆದರೆ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಕೇಂದ್ರ ಅರಣ್ಯ ಸಚಿವರನ್ನು ಕರೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಬೆಳೆ ಗ್ಯಾರಂಟಿ ಇಲ್ಲ:ರಾಜ್ಯ ಸರ್ಕಾರದ ಅರಣ್ಯ ಸಚಿವರನ್ನು ಇಲ್ಲಿಗೆ ಕರೆತರುವ ಕೆಲಸ ಆಗುತ್ತಿಲ್ಲ. ಇಲ್ಲಿಗೆ ಬಂದು ರೈತರ ಕಷ್ಟ ಕೇಳುವ ಸೌಜನ್ಯವೂ ಸಚಿವರಿಗೆ ಇಲ್ಲ. ನಿತ್ಯ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸರ್ಕಾರ ''''''''ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ'''''''' ಎನ್ನುತ್ತದೆ, ಆದರೆ ಅನ್ನದಾತರಿಗೆ ಯಾವ ಗ್ಯಾರಂಟಿಯೂ ಇಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಈ ಸಮಸ್ಯೆಗಳ ಬಗ್ಗೆ ಗಮನಹರಿಸಲು ಸಮಯವೇ ಇಲ್ಲ ಎಂದು ಕಿಡಿಕಾರಿದರು.
ಇದೇ ವೇಳೆ ರೈತರು ಕಾಡಾನೆ ದಾಳಿಯಿಂದ ಆಗುತ್ತಿರುವ ಸಮಸ್ಯೆ ಹಾಗೂ ಹಾನಿ ಕುರಿತು ಅಳಲುತೋಡಿಕೊಂಡರು.
ಬಾಕ್ಸ್..........
ಚನ್ನಪಟ್ಟಣ: ರೈತರು ಬೀದಿಗೆ ಬಂದು ಕೂರುವುದು ನಮಗೆ ಇಷ್ಟವಿಲ್ಲ. ನಿಮ್ಮ ನೋವು, ಸಂಕಷ್ಟ ನನಗೆ ಸಂಪೂರ್ಣವಾಗಿ ಅರ್ಥವಾಗಿದೆ. ಶೀಘ್ರದಲ್ಲೇ ಕೇಂದ್ರ ಅರಣ್ಯ ಸಚಿವರನ್ನು ಕರ್ನಾಟಕಕ್ಕೆ ಕರೆತಂದು, ರಾಜ್ಯದ ಕಾಡಾನೆ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತೇನೆ. ದಯವಿಟ್ಟು ಪ್ರತಿಭಟನೆ ಕೈಬಿಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರೈತರಿಗೆ ಮನವಿ ಮಾಡಿದರು.
ಬಾಕ್ಸ್...............
ಚನ್ನಪಟ್ಟಣ: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಘಟನೆಯನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದರು.
ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರೋದು ಖಂಡನೀಯ. ವಿದ್ಯಾರ್ಥಿಗಳಲ್ಲಿ ಒಡಕು ಮೂಡಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪೊಟೋ೨೪ಸಿಪಿಟಿ೧:ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ರೈತರ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.