ಸ್ವಾವಲಂಬಿ ಜೀವನಕ್ಕೆ ಗ್ಯಾರಂಟಿ

KannadaprabhaNewsNetwork |  
Published : Jul 30, 2025, 12:48 AM IST
ಪೋಟೊ29ಕೆಎಸಟಿ1: ಕುಷ್ಟಗಿ ಪಟ್ಟಣದ ತಾಪಂ ಆವರಣದಲ್ಲಿನ ಗ್ಯಾರಂಟಿ ಅನುಷ್ಟಾನ ಸಮಿತಿಯ ಕಚೇರಿಯಲ್ಲಿ ಗ್ಯಾರಂಟಿ ಅಭಿಯಾನ ಕಾರ್ಯಕ್ರಮಕ್ಕೆ ಕಾಡಾ ನಿಗಮ ಅಧ್ಯಕ್ಷ ಹಸನಸಾಬ ದೋಟಿಹಾಳ ಚಾಲನೆ ನೀಡಿದರು.29ಕೆಎಸಟಿ1.1: ಕುಷ್ಟಗಿ ಪಟ್ಟಣದ ತಾಪಂ ಆವರಣದಲ್ಲಿನ ಗ್ಯಾರಂಟಿ ಅನುಷ್ಟಾನ ಸಮಿತಿಯ ಕಚೇರಿಯಲ್ಲಿ ಗ್ಯಾರಂಟಿ ಅಭಿಯಾನ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ಕಾಡಾ ನಿಗಮ ಅಧ್ಯಕ್ಷ ಹಸನಸಾಬ ದೋಟಿಹಾಳ ಅವರು ವಿತರಿಸಿದರು. | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳಿಂದ ಕುಟುಂಬದ ಅಭಿವೃದ್ಧಿಗೆಯೊಂದಿಗೆ ಮಹಿಳಾ ಸಬಲೀಕರಣವೂ ಆಗುತ್ತಿದೆ. ಯಾರು ಗ್ಯಾರಂಟಿ ಸೌಲಭ್ಯದಿಂದ ವಂಚಿತರಾಗಬಾರದು. ಬಾಕಿ ಇರುವ ಫಲಾನುಭವಿಗಳನ್ನು ಪತ್ತೆ ಮಾಡಿ ಎಲ್ಲರಿಗೂ ಸೌಲಭ್ಯ ಒದಗಿಸಿಕೊಡಬೇಕು.

ಕುಷ್ಟಗಿ:ಸ್ವಾವಲಂಬಿ ಜೀವನ ನಡೆಸಲು ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ತುಂಗಭದ್ರಾ ಕಾಡಾ ನಿಗಮದ ಅಧ್ಯಕ್ಷ ಹಸನಸಾಬ್‌ ದೋಟಿಹಾಳ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಗ್ಯಾರಂಟಿಯ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಟ್ಟಿದೆ. ಸಂಬಂಧಿಸಿದ ಅನುಷ್ಠಾನ ಸಮಿತಿ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರತಿಯೊಬ್ಬರಿಗೂ ಸೌಲಭ್ಯ ತಲುಪಿಸಬೇಕೆಂದರು.

ಗ್ಯಾರಂಟಿ ಯೋಜನೆಗಳಿಂದ ಕುಟುಂಬದ ಅಭಿವೃದ್ಧಿಗೆಯೊಂದಿಗೆ ಮಹಿಳಾ ಸಬಲೀಕರಣವೂ ಆಗುತ್ತಿದೆ ಎಂದ ಅವರು, ಯಾರು ಗ್ಯಾರಂಟಿ ಸೌಲಭ್ಯದಿಂದ ವಂಚಿತರಾಗಬಾರದು. ಬಾಕಿ ಇರುವ ಫಲಾನುಭವಿಗಳನ್ನು ಪತ್ತೆ ಮಾಡಿ ಎಲ್ಲರಿಗೂ ಸೌಲಭ್ಯ ಒದಗಿಸಿಕೊಡಬೇಕು ಎಂದರು.

ಸಮರ್ಪಕ ಅನುಷ್ಠಾನದ ಸಲುವಾಗಿ ತಾಲೂಕಿನಲ್ಲಿ ಗ್ಯಾರಂಟಿ ಸಮಿತಿ ಪದಾಧಿಕಾರಿಗಳನ್ನು ನೇಮಿಸಿದ್ದು ಅಧಿಕಾರಿಗಳ ಜತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುವ ಮೂಲಕ ಎಲ್ಲರಿಗೂ ಸೌಲಭ್ಯ ಒದಗಿಸಿಕೊಡಬೇಕೆಂದು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಗ್ಯಾರಂಟಿ ಅಭಿಯಾನವೂ ಕುಷ್ಟಗಿಯಲ್ಲಿ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಹೋಬಳಿಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗುವುದು. ಈ ಯೋಜನೆಗಳು ನಿರಂತರವಾಗಿ ನಡೆಯಲಿದ್ದು ಅಧಿಕಾರಿಗಳು ಫಲಾನುಭವಿಗಳನ್ನು ಭೇಟಿ ಮಾಡಿ ಪಡೆಯುತ್ತಿರುವ ಸೌಲಭ್ಯಗಳು ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದರು.

ಈ ವೇಳೆ ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಫಾರೂಕ್ ಡಾಲಾಯತ್, ಶಾರದಾ ಕಟ್ಟಿಮನಿ, ಉಮಾದೇವಿ ಪೊಲೀಸ್‌ಪಾಟೀಲ, ಆಯಿಷಾ, ಶೋಭಾ ಪುರ್ತಗೇರಿ, ವೀರಬಸಯ್ಯ ಕಾಡಗಿಮಠ, ಬಾಳಪ್ಪ ಅರಳಿಕಟ್ಟಿ, ನಾಗರಾಜ ಭಜಂತ್ರಿ, ಆನಂದಗೌಡ, ಸೇರಿದಂತೆ ನಾಮಿನಿರ್ದೇಶಿತ ಸದಸ್ಯರು, ಸಿಡಿಪಿಒ ಯಲ್ಲಮ್ಮ ಹಂಡಿ, ಯುವನಿಧಿ ನೋಡಲ್ ಅಧಿಕಾರಿ ಶಿವಯೋಗಿ ಹೊಸಳ್ಳಿ, ಆಹಾರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’