ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಸಭೆಯಲ್ಲಿ ಸಚಿವ
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಸಿವನ್ನು ನೀಗಿಸುವ ಯೋಜನೆಗಳಾಗಿವೆ ಎಂದು ಸಚಿವ ಭೈರತಿ ಸುರೇಶ ಹೇಳಿದರು
ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇರುವವರೆಗೊ ರಾಜ್ಯದಲ್ಲಿ ಯಾವ ಕಾರಣಕ್ಕೂ ಯೊಜನೆಗಳನ್ನು ರದ್ದುಗೊಳಿಸುವುದಿಲ್ಲ. ಇವುಗಳು ಬಡವರ ಪಾಲಿನ ಆಧಾರಸ್ತಂಭವಾಗಿವೆ ಎಂದರು.ಜನತೆಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅತೀ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯವರು ಏನೇ ಸುಳ್ಳು ಹೇಳಿದರೂ ರಾಜ್ಯದ ಜನತೆ ಅವರಿಗೆ ಮತ ಹಾಕುವುದಿಲ್ಲ. ಕೊಟ್ಟ ಮಾತಿನಂತೆ ಎಲ್ಲ ಭರವಸೆಗಳನ್ನು ಈಡೇರಿಸಿದ ಯಾವುದಾದರೂ ಪಕ್ಷವಿದ್ದರೆ ಅದು ಕಾಂಗ್ರೆಸ್. ಮತ್ತೊಮ್ಮೆ ವಿಶ್ವಾಸವಿಟ್ಟು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳರಿಗೆ ಹೆಚ್ಚಿನ ಮತ ಹಾಕಿಸಿ ಗೆಲ್ಲಿಸಿ ತರಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಅಭ್ಯರ್ಥಿ ರಾಜಶೇಖರ ಹಿಟ್ನಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಶೇಖರಗೌಡ ಗುಮಗೇರಿ, ಯಂಕಣ್ಣ ಯರಾಶಿ, ಹನುಮಂತಗೌಡ ಚೆಂಡೂರು, ವೀರನಗೌಡ ಬಳೂಟಗಿ, ರಾಘವೇಂದ್ರ ಜೋಶಿ, ಗಿರಿಜಾ ಸಂಗಟಿ, ಡಾ. ಶಿವನಗೌಡ ದಾನರಡ್ಡಿ, ಸಾವಿತ್ರಿ ಗೊಲ್ಲರ, ರಸೂಲಸಾಬ ದಮ್ಮೂರ, ಫರೀದಾಬೇಗಂ ಮತ್ತಿತರರಿದ್ದರು.