ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಲಿ

KannadaprabhaNewsNetwork |  
Published : Oct 06, 2024, 01:19 AM IST
ಚಿತ್ರ 4ಬಿಡಿಆರ್57 | Kannada Prabha

ಸಾರಾಂಶ

Guarantee projects are properly implemented

ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊಹ್ಮದ್‌ ರಿಯಾಜ್‌ ಸೂಚನೆ

ಕನ್ನಡಪ್ರಭ ವಾರ್ತೆ ಬೀದರ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಗ್ಯಾರಂಟಿ ಯೋಜನೆ ಬೀದರ್‌ ತಾಲೂಕಾ ಅಧ್ಯಕ್ಷ ಮೊಹ್ಮದ್ ರಿಯಾಜ್ ಮಾತನಾಡಿ, ಬೀದರ್ ಜಿಲ್ಲೆಯು ಶರಣರ ನಾಡು ಜಗತ್ತಿಗೆ ದಾಸೋಹ ಪದ್ಧತಿ ನೀಡಿದ ಪುಣ್ಯ ಭೂಮಿಯಾಗಿದೆ. ಆದ್ದರಿಂದ, ಈ ಜಿಲ್ಲೆಯಲ್ಲಿ ಅನ್ನಭಾಗ್ಯ ಸೇರಿದಂತೆ ಎಲ್ಲಾ ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಲಿ ಎಂದು ಹೇಳಿದರು.

ಉಪಾಧ್ಯಕ್ಷ ರಾಹುಲ್ ಮಡಕೆ ಮಾತಾನಾಡಿ, ಗ್ಯಾರಂಟಿ ಯೋಜನೆಗಳ ಸದುಪಯೋಗ ಎಲ್ಲರು ಪಡೆಯಬೇಕು. ಈ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಾಕಾರಿಯಾಗಲಿವೆ ಎಂದರು.

ಬೀದರ ತಾಪಂ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, ಸಾಕಷ್ಟು ಜನರು ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡಿಸದ ಕಾರಣ ಈ ಯೋಜನೆಗಳಿಂದ ವಂಚಿತರಾಗುತ್ತಿದ್ದೂ ಆದಷ್ಟು ಬೇಗ ಎಲ್ಲರೂ ಆಧಾರ ಜೋಡಣೆ ಮಾಡಿಸಿಕೊಳ್ಳಬೇಕು ಎಂದರು. ಈ ವೇಳೆ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಅಮೃತರಾವ ಚಿಮಕೋಡೆ, ಸೇರಿದಂತೆ ಇತರರು ಉಪಸ್ಥಿತರಿದ್ದರು

----

ಚಿತ್ರ 4ಬಿಡಿಆರ್57

ಬೀದರ್‌ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ