ಹೋಬಳಿಯಲ್ಲೂ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮ್ಮೇಳನ

KannadaprabhaNewsNetwork |  
Published : Apr 30, 2025, 12:35 AM IST
29ಕೆಪಿಎಲ್21 ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ಪಂಚ ಗ್ಯಾರಂಟಿಗಳು ಬಡ, ಹಿಂದುಳಿದ ವರ್ಗ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸಿದೆ. ಗ್ಯಾರಂಟಿ ಯೋಜನೆಗಳಡಿ ಲಾಭ ಪಡೆದ ಅರ್ಹ ಫಲಾನುಭವಿಗಳೊಂದಿಗೆ ಹೋಬಳಿ ಮಟ್ಟದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಕೊಪ್ಪಳ:

ಮುಂಬರುವ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚ ಗ್ಯಾರಂಟಿಗಳು ಬಡ, ಹಿಂದುಳಿದ ವರ್ಗ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸಿದೆ. ಗ್ಯಾರಂಟಿ ಯೋಜನೆಗಳಡಿ ಲಾಭ ಪಡೆದ ಅರ್ಹ ಫಲಾನುಭವಿಗಳೊಂದಿಗೆ ಹೋಬಳಿ ಮಟ್ಟದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಗಂಗಾವತಿ ತಾಲೂಕಿನ ಮರಳಿಯಲ್ಲಿ ಸಮ್ಮೇಳನ ಆಯೋಜಿಸಲು ಪೂರ್ವಭಾವಿ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳ ಯೋಜನೆಗಳಡಿ ಜಿಲ್ಲೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಈ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಸಭೆಗಳಲಿಯೂ ಚರ್ಚಿಸಬೇಕು. ಇದರಿಂದ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುವ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಅನುಕೂಲವಾಗುತ್ತದೆ. ಯಾವ ಅರ್ಹ ಫಲಾನುಭವಿ ಹೊರಗುಳಿಯದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಂದ ಬದುಕು ಕಟ್ಟಿಕೊಂಡು, ಇತರರಿಗೆ ಮಾದರಿಯಾದ ಫಲಾನುಭವಿಗಳ ಯಶೋಗಾಥೆಗಳ ಮಾಹಿತಿ ಸಂಗ್ರಹಿಸಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದರು.

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ:

ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ 3,24,354 ಫಲಾನುಭವಿಗಳಿಗೆ ಜನವರಿ ಅಂತ್ಯದ ವರೆಗೆ ಡಿಬಿಟಿ ಮೂಲಕ ₹ 1093.09 ಕೋಟಿ, ಗೃಹಜ್ಯೋತಿ ಯೋಜನೆಯಡಿ ಮಾರ್ಚ್ ಅಂತ್ಯದ ವರೆಗೆ 2,77,414 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ ₹ 231.35 ಕೋಟಿ ಖರ್ಚು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಿಗೆ ಡಿಸೆಂಬರ್ ಅಂತ್ಯದ ವರೆಗೆ 2,99,213 ಕಾರ್ಡ್‌ದಾರರಿಗೆ ₹ 18.39 ಕೋಟಿ ವೆಚ್ಚ ಭರಿಸಲಾಗಿರುತ್ತದೆ. ಫೆಬ್ರವರಿಯಿಂದ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಶಕ್ತಿಯೋಜನೆಯಡಿ ಮಾರ್ಚ್ ವರೆಗೆ 7.2 ಕೋಟಿ ಮಹಿಳೆಯರು ಕಲ್ಯಾಣ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ₹ 248.09 ಕೋಟಿ ಖರ್ಚಾಗಿದೆ. ಯುವನಿಧಿ ಯೋಜನೆಯಡಿ ಈ ವರೆಗೆ 8633 ನೋಂದಣಿಯಾಗಿದ್ದು, ₹ 10.05 ಕೋಟಿ ಪಾವತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೋಂಡಬಾಳ, ಖಾಸಿಂಸಾಬ್‌ ಮರ್ದಾನಸಾಬ್‌, ನಾಗರಾಜ ಅರಳಿ, ಅಮರೇಶ ಎಸ್.ಜಿ., ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ