ಉಳ್ಳಾಲ: ರಾಜ್ಯ ಸರ್ಕಾರ ಅನುಷ್ಟಾನಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಿಂದ ಇಂದು ಮಹಿಳೆಯರು ಸ್ವಾಭಿಮಾನದಿಂದ ಬದುಕುತ್ತಿದ್ದಾರೆ. ಕುಟುಂಬವನ್ನ ನಿರ್ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದೆ. ತೊಟ್ಟಿಲನ್ನ ತೂಗೋ ಕೈಗಳು ದೇಶವನ್ನ ಆಳಬಹುದೆಂದು ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ತೋರಿಸಿಕೊಟ್ಟಿದ್ದು, ಅವರ ಧೈರ್ಯ, ತತ್ವಾದರ್ಶಗಳನ್ನ ನಾವು ಮೈಗೂಡಿಸಬೇಕಿದೆ ಎಂದು ಕೆಪಿಸಿಸಿ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.ಮಂಗಳೂರು ವಿಧಾನಸಭಾ ಕ್ಷೇತ್ರ ಪ್ರಿಯದರ್ಶಿನಿ ಮಹಿಳಾ ವೇದಿಕೆ ಆಶ್ರಯದಲ್ಲಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಶನಿವಾರ ‘ನಮ್ಮ ಕಥೆ, ನಮ್ಮ ಶಕ್ತಿ, ನಮ್ಮ ಯಶಸ್ಸು, ಬನ್ನಿ ಮಹಿಳಾ ಸಮಾವೇಶದಲ್ಲಿ’ ಎಂಬ ಘೋಷಣೆಯಡಿ ನಡೆದ ‘ಪರಿವರ್ತನಾ’ ಮಹಿಳಾ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಾರ್ಡ್ ವಿತರಣೆ ಹಾಗೂ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ನೋಂದಣಿ ಕಾರ್ಯ ನಡೆಯಿತು.ಸ್ಪೀಕರ್ ಯು.ಟಿ. ಖಾದರ್, ಹಿರಿಯ ಕಾಂಗ್ರೆಸಿಗರಾದ ವಾರಿಜ ಬಾಬು ಸುವರ್ಣ, ಲೂಯಿಸ್ ಮೊಂತೆರೋ, ನೆಬಿಸ ಮಹಮ್ಮದ್ ಮಲಾರ್, ಕೆಪಿಸಿಸಿ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ, ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ, ಮಾಜಿ ಶಾಸಕಿ ಶಕುಂತಳ ಶೆಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾಲ ನಾರಾಯಣ ರಾವ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಟಿಲ್ಡ ಡಿಸೋಜ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಪರಿಸರ ಹಾಗೂ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಶಾಲೆಟ್ ಪಿಂಟೋ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಪ್ರತಿಭಾ ಕುಳಾಯಿ, ಸಾವಯವ ಬೀಜ ಪ್ರಾಮಣೀಕರಣ ನಿಗಮದ ಅಧ್ಯಕ್ಷೆ ಲಾವಣ್ಯ ಬಳ್ಳಾಲ್, ವಕ್ಫ್ ರಾಜ್ಯ ಸಮಿತಿ ಸದಸ್ಯೆ ರಝಿಯಾ ಇಬ್ರಾಹಿಂ, ಬೆಂಗಳೂರು ಸೆಂಟ್ರಲ್ ಉಸ್ತುವಾರಿ ಸುರಯ್ಯ ಅಂಜುಮ್, ಮಂಗಳೂರು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಅಪ್ಪಿ ಎಸ್., ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಆಂಚನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್, ಉಳ್ಳಾಲ ನಗರಸಭಾಧ್ಯಕ್ಷೆ ಶಶಿಕಲಾ ಅವರನ್ನು ಸನ್ಮಾನಿಸಲಾಯಿತು.ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಚಂದ್ರಿಕಾ ರೈ ಸ್ವಾಗತಿಸಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಖಾ ಚಂದ್ರಹಾಸ್ ವಂದಿಸಿದರು. ವಿಜೆ ಶರ್ಮಿಳಾ ನಿರೂಪಿಸಿದರು.