ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಅನುಷ್ಠಾನ ಜವಾಬ್ದಾರಿ ನಿರ್ವಹಿಸಿ : ಡಾ. ಎಚ್.ಕೆ. ಪಾಟೀಲ

KannadaprabhaNewsNetwork |  
Published : Feb 04, 2025, 12:34 AM ISTUpdated : Feb 04, 2025, 01:12 PM IST
ಗದಗ ಜಿಪಂ ವಿಡಿಯೋ ಸಭಾಂಗಣದಲ್ಲಿ ಸೋಮವಾರ ನಡದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಎಚ್‌.ಕೆ. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಗದಗ ನಗರದ ಜಿಪಂ ವಿಡಿಯೋ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಗದಗ: ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಅನುಷ್ಠಾನವು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಪಂ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಪಂಚಗ್ಯಾರಂಟಿ ಯೋಜನೆಯ ಮಹತ್ವವನ್ನು ಅರ್ಥೈಸಿಕೊಳ್ಳುವುದು ಹಾಗೂ ಅವುಗಳ ಅನುಷ್ಠಾನವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಶ್ರದ್ಧೆವಹಿಸಿ ಕೆಲಸ ಮಾಡಬೇಕು. ಗದಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರು ಒಟ್ಟು 82,000 ಜನರನ್ನು ಸಂಪರ್ಕಿಸಿ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿದ್ದಾರೆ. 40,000 ಬಡಜನರಿಗೆ ಕಣ್ಣು ಪರೀಕ್ಷೆ ನಡೆಸಲಾಗಿದೆ. 4,000 ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿ 17,000 ಬಡಜನರಿಗೆ ಕನ್ನಡಕ ಕೊಡಿಸಲಾಗಿದೆ. ಬಡವರಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿಯೇ ತಲುಪಿಸುವಂತಾಗಬೇಕು. ಅನರ್ಹರನ್ನು ಹೊರತುಪಡಿಸಿ, ಯೋಜನೆಗಳ ಅನುಷ್ಠಾನ ಶೇ. 100ರಷ್ಟು ಪ್ರಗತಿ ಸಾಧಿಸಬೇಕು. ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಪ್ರಾಮಾಣಿಕತನವಿರಬೇಕು. ಭ್ರಷ್ಟಾಚಾರರಹಿತ ಪಾರದರ್ಶಕ ಆಡಳಿತ ನಡೆಸಿ ಅರ್ಹರು ಇದರ ಲಾಭ ಪಡೆಯುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.

ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆ ಲಭಿಸುವಲ್ಲಿ ಫಲಾನುಭವಿಗಳಿಗೆ ಯಾವುದೇ ಅಡಚಣೆಗಳು ಉಂಟಾದರೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಾಗ ಸಮೀಕ್ಷೆ ಮುಖಾಂತರ ಅರ್ಹ ಹಾಗೂ ಅನರ್ಹ ಫಲಾನುಭವಿಗಳ ಪಟ್ಟಿ ತಯಾರು ಮಾಡಬೇಕು. ಗೃಹಲಕ್ಷ್ಮೀ ಯೋಜನೆಗಳ ಫಲಾನುಭವಿಗಳಿಗೆ ಯೋಜನೆ ಸೌಲಭ್ಯದ ಕುರಿತು ಸಮೀಕ್ಷೆ ಮಾಡುವಾಗ ಸಿಡಿಪಿಒಗಳು ಅಂಗನವಾಡಿ ಕಾರ್ಯಕರ್ತೆಯರು ಸೂಕ್ತ ಮಾರ್ಗದರ್ಶನ ಮಾಡಬೇಕು. ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವ ಶಕ್ತಿ ಯೋಜನೆಯ ಸೌಲಭ್ಯ ನಿಗದಿತ ಕಾಲವಧಿಯಲ್ಲಿಯೇ ದೊರಕಬೇಕು. ಮಹಿಳೆಯರು ಶಕ್ತಿ ಯೋಜನೆ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಾ. 16ರೊಳಗೆ ಪಂಚ ಗ್ಯಾರಂಟಿ ಯೋಜನೆ ಪೂರ್ಣ ಪ್ರಮಾಣದ ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.

ಪಂಚ ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿ, ಗೃಹಲಕ್ಷ್ಮೀ ಯೋಜನೆಯಡಿ ಅ. 2024ರ ವರೆಗೆ ಗದಗ ತಾಲೂಕಿನಲ್ಲಿ 78,334 ನೋಂದಣಿಯಾದ ಅರ್ಜಿಗಳ ಪೈಕಿ 77,191 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ.

ಜಿಲ್ಲೆಯಲ್ಲಿ ವಾಕರಸಾ ಸಂಸ್ಥೆಯಿಂದ 2023 ಜೂ. 11ರಿಂದ 2025 ಜ. 26ರ ವರೆಗೆ 5.51 ಕೋಟಿ ಪುರುಷ ಪ್ರಯಾಣಿಕರು ಹಾಗೂ 8.39 ಕೋಟಿ ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟಾರೆ 13.90 ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಗದಗ ತಾಲೂಕಿನಲ್ಲಿ ಸೆ. 2024ರ ಮಾಹೆಯಲ್ಲಿ 28,842 ಫಲಾನುಭವಿಗಳಿಗೆ ₹1,62,16,470 ಡಿಬಿಟಿ ಮೂಲಕ ಹಣ ಸಂದಾಯ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2025 ಜ. 31ರ ವರೆಗೆ ಗದಗ ಗ್ರಾಮೀಣ ಉಪವಿಭಾಗದಲ್ಲಿ 53,268 ಸ್ಥಾವರಗಳು ಅರ್ಹವಿದ್ದು, 52,909 ಸ್ಥಾವರಗಳ ನೋಂದಣಿಯಾಗಿದ್ದು, ಶೇ. 99.33 ಪ್ರಗತಿಯಾಗಿದೆ. ಗದಗ ಶಹರ ಉಪವಿಭಾಗದಲ್ಲಿ 45,901 ಸ್ಥಾವರಗಳು ಅರ್ಹವಾಗಿದ್ದು, 45,549 ಸ್ಥಾವರಗಳ ನೋಂದಣಿಯಾಗಿದ್ದು, ಶೇ 99.23 ಪ್ರಗತಿಯಾಗಿದೆ.

ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ ಡಿ. 2024ರ ವರೆಗೆ 1350 ಫಲಾನುಭವಿಗಳ ನೋಂದಣಿಯಾಗಿದ್ದು, 857 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ₹1,69,77,000 ವರ್ಗಾವಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ಒದಗಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಪಂ ಸಿಇಒ ಭರತ್ ಎಸ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೊರವನವರ, ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ದಯಾನಂದ ಪವಾರ, ಸಂಗು ಕರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಬಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್. ಪಾಟೀಲ, ಸಾವಿತ್ರಿ ಹೂಗಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ
ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ