ರಟ್ಟೀಹಳ್ಳಿ: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲ ವಾರ್ಡ್‌ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಗ್ಯಾರಂಟಿ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಜಿಪಂ ಮಾಜಿ ಸದಸ್ಯ ಪ್ರಕಾಶ ಬನ್ನಿಕೋಡ, ಮಹೇಶ ಗುಬ್ಬಿ, ರವೀಂದ್ರ ಮುದಿಯಪ್ಪನವರ, ಎ.ಕೆ. ಪಾಟೀಲ್, ಪಿ.ಡಿ. ಬಸನಗೌಡ್ರ, ವೀರನಗೌಡ ಪ್ಯಾಟಿಗೌಡ್ರ, ರಮೇಶ ಮಡಿವಾಳರ, ಹನುಮಂತಗೌಡ ಭರಮಣ್ಣನರ, ಬಾಬುಸಾಬ ಜಡದಿ, ವಿಜಯ ಅಂಗಡಿ, ನಾಗನಗೌಡ ಕೋಣ್ತಿ, ಜಾಕೀರ ಮುಲ್ಲಾ, ಸುನೀತಾ ದ್ಯಾವಕ್ಕಳವರ, ನಿಂಗಪ್ಪ ಕಡೂರ ಮುಂತಾದವರು ಇದ್ದರು.ಬಿಜೆಪಿ ಅಭ್ಯರ್ಥಿಗಳ ಗೆಲ್ಲಿಸಿ: ಬಿ.ಸಿ. ಪಾಟೀಲ
ರಟ್ಟೀಹಳ್ಳಿ: ಪಟ್ಟಣದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದರಿಂದ ಬಿಜೆಪಿಗೆ ಮತ ಕೇಳುವ ನೈತಿಕತೆ ಇದೆ. ಪಟ್ಟಣದ ಎಲ್ಲ 15 ಬಿಜೆಪಿ ಅಭ್ಯರ್ಥಿಗಳನ್ನು ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಮನವಿ ಮಾಡಿದರು.ಪಟ್ಟಣದ ಭಗತ್‍ಸಿಂಗ್ ವೃತ್ತದಿಂದ ಪ್ರಾರಂಭವಾದ ಪಾದಯಾತ್ರೆಯ ನಂತರ ಭಗತ್‍ಸಿಂಗ್ ವೃತ್ತದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ, ತಾಲೂಕನ್ನು ಮಾಡಿದ್ದು ಸಿದ್ದರಾಮಯ್ಯ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಮಹಾನ್ ನಾಯಕರು ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ. ಇದನ್ನು ಪ್ರಜ್ಞಾವಂತ ಸಾಮಾನ್ಯ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. 20ರಂದು ಚುನಾವಣಾ ಫಲಿತಾಂಶದ ದಿನ ಬಿಜೆಪಿ ಅಭ್ಯರ್ಥಿಗಳು ಎಲ್ಲ 15 ಅಭ್ಯರ್ಥಿಗಳು ವಿಜಯಶಾಲಿಯಾಗುವುದರ ಮೂಲಕ ಕಾಂಗ್ರೆಸ್‍ನವರಿಗೆ ಮುಖಭಂಗ ಆಗುವುದರಲ್ಲಿ ಎರಡು ಮಾತಿಲ್ಲ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ತಾಲೂಕಾಧ್ಯಕ್ಷ ದೇವರಾಜ ನಾಗಣ್ಣನವರ, ಪಾಲಾಕ್ಷಗೌಡ ಪಾಟೀಲ್, ಮಾಜಿ ಮುಖ್ಯ ಸಚೇತಕ ಡಿ.ಎಂ. ಸಾಲಿ, ಎನ್.ಎಂ. ಈಟೇರ, ಶಂಬಣ್ಣ ಗೂಳಪ್ಪನವರ, ಆರ್.ಎನ್. ಗಂಗೋಳ, ಪರಮೇಶಪ್ಪ ಹಲಗೇರಿ, ಹನುಮಂತಪ್ಪ ಗಾಜೇರ, ಮಾಲತೇಶ ಬೆಳಕೆರಿ ಹಾಗೂ ನೂರಾರು ಕಾರ್ಯಕರ್ತರು ಇದ್ದರು.