ಗ್ಯಾರಂಟಿ ಯೋಜನೆಯಿಂದ ಬಡವರ ಜೀವನ ಮಟ್ಟ ಸುಧಾರಣೆ: ನಾಗರಾಜ ಮಡಿವಾಳರ

KannadaprabhaNewsNetwork |  
Published : Oct 12, 2025, 01:01 AM IST
ಕಾರ್ಯಕ್ರಮದಲ್ಲಿ ನಾಗರಾಜ ಮಡಿವಾಳರ ಮಾತನಾಡಿದರು. | Kannada Prabha

ಸಾರಾಂಶ

ಪಂಚ ಗ್ಯಾರಂಟಿ ಯೋಜನೆಗಳು ಶೇ. 99ರಷ್ಟು ಪ್ರತಿ ಸಾಧಿಸಿರುವುದು ಗ್ಯಾರಂಟಿ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ.

ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿಗೆ ಬೆಳಕು ನೀಡುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಗ್ಯಾರಂಟಿ ಯೋಜನೆಗಳಲ್ಲಿನ ತಪ್ಪುಗಳನ್ನು ಸರಿಪಡಿಸುವ ಕಾರ್ಯ ಮಾಡುತ್ತೇವೆ ಎಂದು ಗ್ಯಾರಂಟಿ ಯೋಜನೆಯ ಅಧ್ಯಕ್ಷ ನಾಗರಾಜ ಮಡಿವಾಳರ ತಿಳಿಸಿದರು.

ಸಮೀಪದ ಸೂರಣಗಿ ಗ್ರಾಪಂ ಕಟ್ಟಡದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ಜನರ ಬದುಕಿನ ಮಟ್ಟ ಸುಧಾರಣೆ ತರುವಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ. ಗ್ಯಾರಂಟಿ ಯೋಜನೆಗಳು ಯಾವುದೇ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳು ಶೇ. 99ರಷ್ಟು ಪ್ರತಿ ಸಾಧಿಸಿರುವುದು ಗ್ಯಾರಂಟಿ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಪ್ರತಿ ತಿಂಗಳು ಜನರಿಗೆ ನೀಡಿರುವ ಭರವಸೆ ಈಡೇರಿಸುವ ಕಾರ್ಯ ಮಾಡುತ್ತಿರುವ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಸಚಿವರ ಶ್ರಮ ಎದ್ದು ಕಾಣುತ್ತಿದೆ ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಶಂಕ್ರಣ್ಣ ಶೀರನಹಳ್ಳಿ, ರಮೇಶ ಬಾರ್ಕಿ, ರಂಜಾನ್ ನದಾಫ್, ಶಶಿಕಲಾ ಬಡಿಗೇರ, ಹಸನ್ ಜಂಗ್ಲಿ, ಖಾದರಸಾಬ ರಿತ್ತಿ, ವಿಜಯ ಹಳ್ಳಿ, ಶರಣಪ್ಪ ಇಚ್ಚಂಗಿ, ತಾಪಂ ಕೃಷ್ಣಪ್ಪ ಧರ್ಮರ, ಕೋಟೆಪ್ಪ ವರ್ದಿ, ಗ್ರಾಪಂ ಸದಸ್ಯರು ಹಾಗೂ ಪಂಚ ಗ್ಯಾರಂಟಿ ಯೋಜನೆಯ ಅಧಿಕಾರಿಗಳು ಇದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ ಇಂದು

ಲಕ್ಷ್ಮೇಶ್ವರ: ತಾಲೂಕು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಪಟ್ಟಣದಲ್ಲಿ ಸ್ವಯಂಸೇವಕರಿಂದ ಮಧ್ಯಾಹ್ನ 3 ಗಂಟೆಗೆ ಪಥಸಂಚಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ಆಯೋಜಿಸಿದ್ದು, ಪಥಸಂಚಲನ ಹಾಯ್ದು ಹೋಗುವ ರಸ್ತೆಗಳೆಲ್ಲ ಕೇಸರಿಮಯವಾಗಿವೆ. ಕೇಸರಿ ಬಣ್ಣದ ಬಾವುಟಗಳು, ಬ್ಯಾನರ್‌, ಬಂಟಿಂಗ್ಸ್ ರಾರಾಜಿಸುತ್ತವೆ. ಮಧ್ಯಾಹ್ನ 3 ಗಂಟೆಗೆ ಪಥಸಂಚಲನವು ಮಹಾಕವಿ ಪಂಪವೃತ್ತದಿಂದ ಆರಂಭವಾಗಲಿದೆ ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಯಿ ಪಾರ್ವತಿ ಮಕ್ಕಳ ಬಳಗದ ತೋಟದೇವರ ಮಠದ ಆವರಣದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ.ಸಭೆಯ ಸಾನಿಧ್ಯವನ್ನು ಗಂಜಿಗಟ್ಟಿಯ ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮಿಗಳು ವಹಿಸುವರು. ಮುಖ್ಯ ಅತಿಥಿಗಳಾಗಿ ಗಣ್ಯ ವರ್ತಕ ಪುರಸ್ಕೃತ ಜೀವಂಧರ ಗೋಗಿ ಹಾಗೂ ಗುರುರಾಜ ಕುಲಕರ್ಣಿ ಬೌದ್ಧಿಕ ವರ್ಗ ನಡೆಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ