- ಹೊನ್ನಾಳಿಯಲ್ಲಿ ತುಂಗಭದ್ರಾ ನದಿಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಟೀಕೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಗೆ ಭಾನುವಾರ ಬಿಜೆಪಿ ಕಾರ್ಯಕರ್ತರು, ಮಹಿಳೆಯರೊಂದಿಗೆ ತೆರಳಿ ಪೂಜೆ ಸಲ್ಲಿಸಿ, ನದಿಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಕಳೆದೆರಡು ವರ್ಷದಲ್ಲಿ ಅನಾವೃಷ್ಟಿ ಕಾರಣ ತುಂಗಭದ್ರೆಗೆ ಬಾಗಿನ ಸಲ್ಲಿಸಿರಲಿಲ್ಲ. ಆದರೆ, ಈ ವರ್ಷ ಉತ್ತಮ ಮಳೆಯಾಗಿ ಇದೀಗ ನದಿ ತುಂಬಿ ಹರಿಯುತ್ತಿದೆ. ಇಂದು ನದಿಗೆ ಪೂಜೆ ಸಲ್ಲಿಸಿ, ಬಾಗಿನ ಸಮರ್ಪಿಸುತ್ತಿರುವುದು ತನಗೆ ಸಂತಸ ತಂದಿದೆ ಎಂದು ಹೇಳಿದರು.ಈ ಹಿಂದೆ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಅತಿವೃಷ್ಠಿಯಿಂದ ಸಂಪೂರ್ಣ ಮನೆ ಹಾನಿಗೆ ₹5 ಲಕ್ಷ, ಶೇ.50ರಷ್ಠು ಹಾನಿಯಾದ ಮನೆಗೆ ₹3 ಲಕ್ಷ ಹಾಗೂ ಭಾಗಶಃ ಹಾನಿಯಾದ ಮನೆಗೆ ₹50 ಸಾವಿರ ಪರಿಹಾರ ನೀಡಲಾಗಿದೆ. ಆದರೆ, ಇಂದಿನ ಕಾಂಗ್ರೆಸ್ ಸರ್ಕಾರ ಅತಿವೃಷ್ಟಿ ಪರಿಹಾರ ನೀಡುವಲ್ಲಿ ಮೀನ-ಮೇಷ ಎಣಿಸುತ್ತಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೂಡಲೇ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಿಕೊಡುವ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಅನ್ನಭಾಗ್ಯದಡಿಯಲ್ಲಿ ನೀಡುವ ಅಕ್ಕಿ ಕೂಡ ರಾಜ್ಯ ಸರ್ಕಾರದ್ದಲ್ಲ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ರಾಜ್ಯ ಸರ್ಕಾರ ಕೇವಲ ₹170 ಕೊಡುತ್ತಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿ 2 ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ₹2 ಸಾವಿರ ನೀಡಿದರು. ಬಳಿಕೆ ಫಲಾನುಭವಿಗಳ ಖಾತೆಗೆ ಯೋಜನೆ ಹಣವನ್ನೇ ಹಾಕುತ್ತಿಲ್ಲ ಎಂದು ಕಿಡಿಕಾರಿದರು.
ಬಾಗಿನ ಅರ್ಪಣೆ ಸಂದರ್ಭ ಪುರಸಭೆ ಮಾಜಿ ಅಧ್ಯಕ್ಷ ಹೊಬಳದಾರ ಬಾಬು, ಮಂಜುಇಂಚರ, ರಂಗಪ್ಪ, ಮಹೇಶ್ ಹುಡೇದ್, ಬಿಜೆಪಿ ಜಿಲ್ಲಾ ಮುಖಂಡ ಶಾಂತರಾಜ್ ಪಾಟೀಲ್ ಬಲಮುರಿ, ಪೇಟೆ ಪ್ರಶಾಂತ, ಕೆ.ವಿ. ಶ್ರೀಧರ, ಸತೀಶ್ ವಕೀಲರಾದ ಉಮಾಕಾಂತ ಜೋಯ್ಸ್, ಪ್ರಕಾಶ್, ಪುರೋಹಿತರಾದ ಮನೋಹರ, ಅನೇಕ ಮಹಿಳೆಯವರು ಇದ್ದರು.- - -
ಕೋಟ್ ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕುಗಳಲ್ಲಿ ಸಾಕಷ್ಟು ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗಿವೆ. ಜಿಲ್ಲಾ ಉಸ್ತುವಾರಿ, ಕೃಷಿ,ಕಂದಾಯ ಹಾಗೂ ಡಿಸಿಎಂ ಹಾಗೂ ಸಿ.ಎಂ. ಅವರಿಗೆ ಆಗ್ರಹಪೂರ್ವಕವಾಗಿ ಸಮರ್ಪಕ ಪರಿಹಾರ ಮಂಜೂರು ಮಾಡಬೇಕು- ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ
- - - -21ಎಚ್.ಎಲ್.ಐ1ಃ:ಹೊನ್ನಾಳಿ ತಾಲೂಕಿನಲ್ಲಿ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಗೆ ಭಾನುವಾರ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ನದಿಗೆ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು, ಮಹಿಳೆಯರು ಪಾಲ್ಗೊಂಡರು.