ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆತ್ಮವಿಶ್ವಾಸ ವೃದ್ಧಿ: ಶಾಸಕ ಜಿ.ಎಸ್. ಪಾಟೀಲ

KannadaprabhaNewsNetwork |  
Published : Apr 20, 2026, 02:30 AM IST
ಪೋಟೋ ಶೀರ್ಷಿಕೆ : ಕದಾಂಪುರ ಗ್ರಾಪಂ‌ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಂಡರಗಿ ಕೆಎಸ್ಆರ್ ಟಿಸಿ ಡಿಪೋ ಮ್ಯಾನೇಜರ್ ಶೇಖರ ನಾಯಕರನ್ನು ಶಾಸಕರು ತರಾಟೆಗೆ ತೆಗೆದುಕೊಂಡಿರುವುದು.ಪೋಟೋ ಶೀರ್ಷಿಕೆ:ವಿವಿಧ ಪಿಂಚಣಿ ಯೋಜನೆ ಫಲಾನುಭವಿಗೆ ಶಾಸಕ ಜಿ ಎಸ್ ಪಾಟೀಲ ಆದೇಶ ಪ್ರತಿಯನ್ನು ನೀಡಿದರು. | Kannada Prabha

ಸಾರಾಂಶ

ರಾಜ್ಯದ ಕಟ್ಟಕಡೆಯ ವ್ಯಕ್ತಿಯೂ ಬಡತನ, ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿದರು.

ಡಂಬಳ: ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿವೆ. ಹೀಗಾಗಿ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರು ಪುರುಷರಷ್ಟೇ ಸಮರ್ಥವಾಗಿ ತಮ್ಮ ಕುಟುಂಬದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ತಾಲೂಕು ಪಂಚ ಗ್ಯಾರಂಟಿ ಯೋಜನೆ ಸಮಿತಿಯಿಂದ ಹಮ್ಮಿಕೊಂಡಿದ್ದ ಡಂಬಳ ಹೋಬಳಿಯ ಕದಾಂಪುರ ಹಾಗೂ ಶಿವಾಜಿನಗರ ಗ್ರಾಮ ಪಂಚಾಯಿತಿಯಲ್ಲಿ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಜ್ಯದ ಕಟ್ಟಕಡೆಯ ವ್ಯಕ್ತಿಯೂ ಬಡತನ, ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿದರು. ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವುದು ಹಾಗೂ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮಾಡಲು ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಯಿತು ಎಂದರು.

ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಕದಾಂಪುರ ಗ್ರಾಪಂ ಹಾಗೂ ಶಿವಾಜಿನಗರ ಗ್ರಾಪಂ 5 ಗ್ಯಾರಂಟಿ ಯೋಜನೆಗಳು ಶೇ. 95ರಷ್ಟು ಸದ್ಬಳಕೆಯಾಗಿವೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗೆ ತಲುಪಿಸುವ ಯೋಜನೆ ಗ್ಯಾರಂಟಿ ಯೋಜನೆಗಳಾಗಿವೆ. ಇದರ ಸದುಪಯೋಗ ಎಲ್ಲ ವರ್ಗದ ಜನರು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಎಸ್. ಪಾಟೀಲ ಅವರಿಂದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ವಿಧವಾ ಮತ್ತು ಅಂಗವಿಕಲ ವೇತನ ಆದೇಶ ಪ್ರತಿ ಸೇರಿದಂತೆ ವಿವಿಧ ಪಿಂಚಣಿ ಆದೇಶ ಪ್ರತಿಯನ್ನು ಫಲಾನುಭವಿಗೆ ನೀಡಿದರು.

ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಅಸೂಟಿ ಅವರು, ಕೆಎಸ್ಆರ್‌ಟಿಸಿ ಮುಂಡರಗಿ ಡಿಪೋ ಮ್ಯಾನೇಜರ್ ಶೇಖರ ನಾಯಕರನ್ನು ತರಾಟೆಗೆ ತೆಗೆದುಕೊಂಡು, ತಾಲೂಕಿನ ಪ್ರತಿ ಗ್ರಾಮಗಳಿಗೆ ಬಸ್‌ಗಳನ್ನು ಬಿಡಿ. ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ. ಹಿರಿಯ ನಾಗರಿಕರಿಗೆ ಬಸ್ ನಿಲ್ದಾಣದಲ್ಲಿ ಆಸನ ವ್ಯವಸ್ಥೆ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.

ತಹಸೀಲ್ದಾರ್ ಯರ್ರಿಸ್ವಾಮಿ ಪಿ.ಎಸ್., ಇಒ ವಿಶ್ವನಾಥ ಹೊಸಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉದಯಕುಮಾರ ಎಲಿವಾಳ, ಆಹಾರ ನಿರೀಕ್ಷಕ ಶಿವರಾಜ ಆಲೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ, ಕೆಇಬಿ ಜೆಇ ಡಿ. ಟೋಪಣ್ಣ ನಾಯಕ, ಕಂದಾಯ ನಿರೀಕ್ಷಕ ಪ್ರಭು ಬಾಗಲಿ, ಎಂ.ಎ. ಕಾತರಕಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ‌‌. ಮೋರನಾಳ,‌ ಪುಲಕೇಶಗೌಡ ಪಾಟೀಲ, ರಾಮನಗೌಡ, ವಿಶ್ವನಾಥ ಪಾಟೀಲ, ನಾಗರಾಜ ಸಜ್ಜನ, ವಿನೋದ ವಡ್ಡರ, ಭುನೇಶ್ವರ ಕಲ್ಲಕುಟಗರ ತಾಲೂಕು ಗ್ಯಾರಂಟಿ ಸಮಿತಿ ಎಲ್ಲ ಸದಸ್ಯರು, ಪಿಡಿಒ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ‘ಶ್ರೀ ಶಾರದಾ ಆಸರೆ ಯೋಜನೆ’ ಆರಂಭ
ಮಾನವೀಯತೆ ಮೇಲೆ ಸಮಾಜ ನಿರ್ಮಾಣವಾಗಲಿ: ಕಿಮ್ಮನೆ