ಗ್ಯಾರಂಟಿ ಯೋಜನೆಗಳು ಜನರ ಬದುಕು ಕಟ್ಟುವ ಕೆಲಸ ಮಾಡಿವೆ: ಪಾಟೀಲ್

KannadaprabhaNewsNetwork |  
Published : Oct 28, 2025, 12:03 AM IST
ಅಫಜಲ್ಪುರ ಪಟ್ಟಣದ ತಾ.ಪ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು.  | Kannada Prabha

ಸಾರಾಂಶ

ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ ನೀಡಿರುವ ಭರವಸೆ ಈಡೆರಿಸಿದ್ದೇವೆ. ಅದರಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಬದುಕು ಕಟ್ಟುವ ಕೆಲಸ ನಾವು ಮಾಡಿದ್ದೇವೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.

ಚವಡಾಪುರ: ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ ನೀಡಿರುವ ಭರವಸೆ ಈಡೆರಿಸಿದ್ದೇವೆ. ಅದರಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಬದುಕು ಕಟ್ಟುವ ಕೆಲಸ ನಾವು ಮಾಡಿದ್ದೇವೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.

ಅಫಜಲಪುರ ತಾ.ಪಂ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿಕೆ ಕುರಿತು ತಾಲೂಕು ಯೋಜನಾ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯೋಜನಾ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಸರ್ವ ಸದಸ್ಯರು ಆಯಾ ಗ್ರಾಮ, ಪಟ್ಟಣಗಳಲ್ಲಿ ಯಾವ ಕೆಲಸಗಳನ್ನು ಮೊದಲ ಆದ್ಯತೆಯಾಗಿ ಕೈಗೆತ್ತಿಕೊಳ್ಳಲು ಸೂಚಿಸುತ್ತೀರಿ ಅವುಗಳನ್ನು ನಾವು ಸರ್ಕಾರದ ಗಮನಕ್ಕೆ ತಂದು ಅನುಷ್ಠಾನಗೊಳಿಸುವ ಕೆಲಸ ಮಾಡುತ್ತೇವೆ. ಮುಂದಿನ ಸಭೆ ನಡೆಯುವಾಗ ಆದ್ಯತೆ ಮೇರೆಗೆ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕೆಂದು ಸಭೆಯಲ್ಲಿ ಸೂಚಿಸಿ ಎಂದರು.

ಇನ್ನೂ ನಮ್ಮ ಸರ್ಕಾರದ ಭರವಸೆಯಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಗೆ ಬಂದು ಜನರಿಗೆ ತಲುಪಿವೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಹೀಗಾಗಿ ರಾಜ್ಯದ ಜನ ನಮ್ಮ ಸರ್ಕಾರದ ಮೇಲೆ ಭರವಸೆ, ನಂಬಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬೊಕ್ಕಸ ಖಾಲಿಯಾಗಿಲ್ಲ, ಬದಲಾಗಿ ಭರ್ತಿಯಾಗುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ವಿಪಕ್ಷಗಳ ಟೀಕೆಗೆ ಉತ್ತರಿಸಿದರು.

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ ಜಮಾದಾರ, ತಹಸೀಲ್ದಾರ ಸಂಜೀವಕುಮಾರ ದಾಸರ್, ತಾ.ಪಂ ಇಒ ವೀರಣ್ಣ ಕವಲಗಿ, ತಾಪಂ ಆಡಳಿತಾಧಿಕಾರಿ ಜಗದೇವಪ್ಪ ಮಾತನಾಡಿದರು.

ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಾಜು ಬಬಲಾದ, ಅನಸೂಯ ಸೂಲೇಕರ, ಅಣವೀರಯ್ಯ ಮಠಪತಿ, ಪ್ರವೀಣ ಕಲ್ಲೂರ, ನಿಜಗುಣ ಚಕ್ರವರ್ತಿ, ಪಾಲಿಟೇಕ್ನಿಕ್ ಕಾಲೇಜು ಪ್ರಾಚಾರ್ಯ ಪ್ರಭುದೇವ ಪಾಟೀಲ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಸಂತೋಷ ಹುಗ್ಗಿ, ವೈದ್ಯಾಧಿಕಾರಿ ಡಾ. ಚೇತನ, ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳಾದ ಮಹಾಂತೇಶ ಯಾಡಗಿ, ಅನಸೂಯ ಅಷ್ಟಗಿ, ಪಾರ್ವತಿ ಪೂಜಾರಿ, ಲಕ್ಷ್ಮೀ ಬಜಂತ್ರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!