- ಚಿಕ್ಕಮಗಳೂರು ಕ್ಷೇತ್ರದ ಶಿವಪುರದಲ್ಲಿ ಜನ ಸಂಪರ್ಕ ಸಭೆ,
ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಜಿಲ್ಲಾ ಪಂಚಾಯಿತಿ ಹಾಗೂ ಕಡೂರು ತಾಲೂಕು ಪಂಚಾಯಿತಿಯಿಂದ ಬಾಣೂರು ಮತ್ತು ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಜನ ಸಂಪರ್ಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಗೆಹರಿಯಬಹುದಾದ ಸಮಸ್ಯೆಗಳಿಗೂ ಪರಿಹಾರ ಕಂಡು ಕೊಳ್ಳಬಹುದಾಗಿದೆ. ಅಧಿಕಾರಿಗಳನ್ನು ಜನರ ಮನೆ ಬಾಗಿಲಿಗೆ ಕರೆತಂದು ಸಮಸ್ಯೆ ಬಗೆಹರಿಸುವುದೇ ಜನ ಸಂಪರ್ಕ ಸಭೆ ಮುಖ್ಯ ಉದ್ದೇಶವಾಗಿದೆ ಎಂದರು.ಸರ್ಕಾರ ಬಡವರ ಹಾಗೂ ಮಹಿಳಾ ಸಬಲೀಕರಣದ ಉದ್ದೇಶದಿಂದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿಯಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲಾ ವರ್ಗದ ಬಡವರನ್ನು ಪ್ರೋತ್ಸಾಹಿಸಿ ಅಭಿವೃದ್ಧಿಗೊಳಿಸುವ ಉದ್ದೇಶ ಹೊಂದಿದೆ. ವರ್ಷಕ್ಕೆ ಸುಮಾರು ₹59 ಸಾವಿರ ಕೋಟಿ ಗಳಷ್ಟು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಯಾವುದೇ ಅಡೆತಡೆಗಳಾಗಿಲ್ಲ ಎಂದು ಹೇಳಿದರು.
ಸಭೆಯಲ್ಲಿ ಕಡೂರು ತಾಲೂಕು ತಹಸೀಲ್ದಾರ್ ಮಂಜುನಾಥ್, ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷ ಮಮತ ಜ್ಞಾನೇಂದ್ರ, ನಾಗೇನಹಳ್ಳಿ ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ ಮಂಜಪ್ಪ, ಉಪಾಧ್ಯಕ್ಷೆ ಚಂದ್ರಮ್ಮ ಮರಿಯಪ್ಪ, ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷೆ ತಾರ, ಹುಲಿಕೆರೆ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸದಸ್ಯರಾದ ವಸಂತ್‌ಕುಮಾರ್, ರವೀಶ್, ಲೀಲಮ್ಮ, ರಾಜಪ್ಪ, ಚಂದ್ರನಾಯ್ಕ್, ಪಿ. ಮಹೇಶ್, ಭಾಗ್ಯ, ನವೀನ್‌ಕುಮಾರ್, ರೇಣುಕಾಮೂರ್ತಿ, ಕಲ್ಮುರಡಪ್ಪ, ಮಂಜುಳಮ್ಮ, ಯಶೋಧಬಾಯಿ, ಉಮಾಕಾಂತ್, ಲೋಕೇಶ್‌ಮೂರ್ತಿ ಉಪಸ್ಥಿತರಿದ್ದರು. 10 ಕೆಸಿಕೆಎಂ 6ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು.