- ಜನಜಾಗೃತಿ ಕಾರ್ಯಕ್ರಮದಲ್ಲಿ ಎಚ್.ಎಂ.ಮಧು ಅಭಿಮತ । ಸಾಕ್ಷ್ಯ ಚಿತ್ರಪ್ರದರ್ಶನ, ಸಂಗೀತ-ಬೀದಿನಾಟಕ ಪ್ರದರ್ಶನ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಆಡಳಿತಾರೂಢ ಸರ್ಕಾರವು ಪಂಚ ಗ್ಯಾರಂಟೆ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ಮಧು ಹೇಳಿದರು.ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಗ್ರಾಮ ಸಂಪರ್ಕ ಯೋಜನೆಯಡಿ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಾಕ್ಷ್ಯ ಚಿತ್ರಪ್ರದರ್ಶನ, ಸಂಗೀತ ಮತ್ತು ಬೀದಿನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜನರಲ್ಲಿ ಮಂದಹಾಸ:
ಯಾವುದೇ ಸರ್ಕಾರ ಜನರ ವೆಚ್ಚ ಸಾಮರ್ಥ್ಯವನ್ನು ಅಥವಾ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದಲ್ಲಿ ಅಂತಹ ಸಮಾಜದಲ್ಲಿ ಅರ್ಥಿಕ ಚಲನಶೀಲತೆ ಆರೋಗ್ಯಕರವಾಗಿರುತ್ತದೆ. ಜಿಡಿಪಿ ಬೆಳವಣಿಯೂ ಉತ್ತಮ ರೀತಿಯಲ್ಲಿರುತ್ತದೆ ಎಂಬುದು ಆರ್ಥಿಕ ತಜ್ಞರ ಅಭಿಮತ. ಇಂತಹ ಮಾದರಿ ಎನಿಸಬಹುದಾದ ಯೋಜನೆಗಳ ಜಾರಿಯಿಂದ ಜನರ ಜೀವನಮಟ್ಟ ಸುಧಾರಣೆಗೊಂಡು ಆರ್ಥಿಕ ಚಟುವಟಿಕೆ ಸುಧಾರಿಸಲಿದೆ ಎಂದು ಹೇಳಿದರು.
ಈ ಕಾರ್ಯಕ್ರಮ ಜಿಲ್ಲೆಯ ಎಲ್ಲ ತಾಲೂಕುಗಳ ಆಯ್ದ 20 ಸ್ಥಳಗಳಲ್ಲಿ ಪ್ರದರ್ಶನ ನೀಡಲಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸುತ ಪಡಿಸುವ ಗ್ಯಾರಂಟಿ ಯೋಜನೆಗಳ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.
(ಕೋಟ್) ಗ್ಯಾರಂಟಿ ಯೋಜನೆಗಳು ಕಡುಬಡವರ, ದುರ್ಬಲರ ಬಾಳನ್ನು ಬೆಳಗಿಸಿವೆ. ವ್ಯವಸ್ಥೆಯಲ್ಲಿ ಬದಲಾವಣೆಯ ದಿನಗಳನ್ನು ಕಾಣಬಹುದಾಗಿದೆ. ಈ ಯೋಜನೆಗಳ ಪಡೆದ ಫಲಾನುಭವಿಗಳು ಸಹಜವಾಗಿ ತೃಪ್ತಭಾವ ಹೊಂದಿರುವುದು ನಮ್ಮ ಅರಿವಿಗೆ ಬರುತ್ತಿದೆ. ಅಷ್ಟೇ ಅಲ್ಲದೇ, ಜಿಲೆಯ ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಸಕ್ರಿಯವಾಗಿದೆ.
- - -
ಶಿವಮೊಗ್ಗ ನಗರದ ಖಾಸಗಿ ಬಸ್‌ನಿಲ್ದಾಣದಲ್ಲಿ ಮಂಗಳವಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಾಕ್ಷ್ಯ ಚಿತ್ರಪ್ರದರ್ಶನ, ಸಂಗೀತ ಮತ್ತು ಬೀದಿನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಎಂ.ಮಧು ಚಾಲನೆ ನೀಡಿದರು.