ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಜನರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ವರದಾನವಾಗಿ ಪರಿಣಮಿಸಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಹೇಳಿದರು.
ಕಂಪ್ಲಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಜನರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ವರದಾನವಾಗಿ ಪರಿಣಮಿಸಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳಿಗೆ ಮೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕಿನ ಜವುಕು ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿಬಿ-ಜಿ ರಾಮ್‌ಜಿ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಘೋಷಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸುವುದು ಸರ್ಕಾರದ ಬದ್ಧತೆಯಾಗಿದೆ. ಈಗಾಗಲೇ ನೋಂದಾಯಿಸಿಕೊಂಡಿರುವ ಫಲಾನುಭವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಸೌಲಭ್ಯಗಳನ್ನು ತಲುಪಿಸಲಾಗುತ್ತಿದ್ದು, ಇನ್ನೂ ಅರ್ಹರಾಗಿರುವವರು ನೋಂದಣಿ ಮಾಡಿಕೊಂಡು ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಸರ್ಕಾರದ ಅಧಿಕೃತ ಮಾಹಿತಿಯನ್ನೇ ನಂಬಬೇಕು ಎಂದು ಮನವಿ ಮಾಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆರ್.ಕೆ. ಶ್ರೀಕುಮಾರ್ ಮಾತನಾಡಿ ಸರ್ಕಾರದ ಜನಪರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶಿವಕುಮಾರ್, ವೀರಭದ್ರಗೌಡ, ಎಂ. ರಾಜಭಕ್ಷಿ, ಪ್ರಮುಖರಾದ ರಾಜನಗೌಡ, ಎ. ಹುಲುಗಪ್ಪ, ಎ. ಕುಮಾರಸ್ವಾಮಿ, ಹನುಮಂತಪ್ಪ, ಸಿ. ಬಸವರಾಜ, ಎನ್. ಬಸವರಾಜ, ಪಿಡಿಒ ಬೀರಲಿಂಗ, ಪಿಡಿಒ ಶಿಲ್ಪಾರಾಣಿ, ಐಇಸಿ ಸಂಯೋಜಕ ಎಚ್. ಹನುಮೇಶ್, ಡಿಇಒ ನಾಗರಾಜ, ಕರವಸೂಲಿಗಾರ ಜಡೆಯ್ಯಸ್ವಾಮಿ, ಬಿಎಫ್‌ಟಿ ಪಂಪಾಪತಿ, ಎಂಬಿಕೆ ಪುಷ್ಪಾವತಿ, ಆಡಳಿತಾಧಿಕಾರಿ ಎಂ. ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆರ್.ಎಂ. ರಾಮಯ್ಯ, ವೆಂಕಟೇಶ್, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.