ಕನ್ನಡಪ್ರಭ ವಾರ್ತೆ ಹಾಸನ
ಹಾಸನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಹಲವು ಸಲಹೆ ಸೂಚನೆಗಳನ್ನು ನೀಡಿದರು. ಇದೇ ವೇಳೆ ಯುವನಿಧಿ ಪೋಸ್ಟರ್ ಮತ್ತು ಕರಪತ್ರಗಳನ್ನು ಬಿಡುಗಡೆ ಮಾಡಿ ಪದವಿ ಮತ್ತು ಡಿಪ್ಲೋಮಾ ಪಡೆದಿರುವ ಪ್ರತಿಯೊಬ್ಬರಿಗೂ ಈ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಎಚ್.ಡಿ, ಹಾಸನ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ರಂಗಸ್ವಾಮಿ, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.