ಕನ್ನಡಪ್ರಭ ವಾರ್ತೆ ಬೀಳಗಿ
ತಾಲೂಕಿನ ಸೊನ್ನ, ಸಿದ್ದಾಪುರ ಹಾಗೂ ತೆಗ್ಗಿ ಗ್ರಾಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದುಕೊರತೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, ತಾಂತ್ರಿಕ ಲೋಪದೋಷಗಳಿಂದ ಕೆಲವರಿಗೆ ಯೋಜನೆಗಳ ಲಾಭ ತಲುಪಿಲ್ಲ. ಅವರಿಗೆ ನೆರವಾಗಲು ಈ ಕುಂದುಕೊರತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ವೆಂಕಣಗೌಡ ಪಾಟೀಲ, ರಸೂಲ್‌ಸಾಬ ಮುಜಾವಾರ, ಚಂದ್ರಶೇಖರ ಪಂಡರಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಸಾಕಷ್ಟು ಅನುಕೂಲವಾಗಿದ್ದು, ಈ ಯೋಜನೆಗಳು ಮುಂದುವರಿಯಲು ಸರ್ಕಾರದ ಯೋಜನೆಗಳನ್ನು ಪಡೆದ ಮಹಿಳೆಯರು ಉಪಕಾರ ಸ್ಮರಣೆ ಮಾಡಬೇಕೆಂದರು.
ತಾಪಂ ಸಹಾಯಕ ಕಾರ್ಯನಿರವಾಹಕ ಅಧಿಕಾರಿ ಸಿದ್ದು ನಕ್ಕರಗುಂದಿ , ಹೆಸ್ಕಾಂ ಇಲಾಖೆಯ ಮಂಜುನಾಥ ಬೊಕಿ, ಆಹಾರ ಇಲಾಖೆಯ ಎ.ಎಲ್. ಸನದಿ, ಎಸ್.ಕೆ. ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಮೇಲ್ವಿಚಾರಕಿ ಸುರೇಖಾ ಹಂಚಿನಾಳ ಇತರರು ಇದ್ದರು.ತೆಗ್ಗಿ ಪಿಕೆಪಿಎಸ್ ಅಧ್ಯಕ್ಷ ಮಲ್ಲಪ್ಪ ಕಾಳಗಿ,ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಸೋಮನಗೌಡ ಪಾಟೀಲ,ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ ಭೂಸರಡ್ಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಬಾಕ್ಸ್: ಫಲಾನುಭವಿಗಳೊಂದಿಗೆ ಸಂವಾದ:ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಮಿತಿಯ ಸದಸ್ಯರು ಸಂವಾದ ನಡೆಸಿದರು.
ಈಗಾಗಲೇ ಈ ಯೋಜನೆಯಿಂದ ಹಲವು ಕುಟುಂಬಗಳಿಗೆ ನೆರವಾಗಿದೆ. ಕೌಟುಂಬಿಕ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಔಷಧಿ ನೆರವು ಸೇರಿದಂತೆ ಶಸ್ತ್ರ ಚಿಕಿತ್ಸೆಗೂ ಹಲವು ರೂಪದಲ್ಲಿ ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆಗಳು ನೆರವು ಆಗಿರುವ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈ ಯೋಜನೆಗಳ ಅಡಿ ಯಾವುದೇ ರೀತಿಯ ದೂರುಗಳಿದ್ದಲ್ಲಿ ಸಾಕ್ಷ್ಯಾಧಾರಗಳ ಆಧಾರದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದ ಸೋಮಲಿಂಗೇಶ್ವರ ದೇವಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಅಣವೀರಯ್ಯ ಪ್ಯಾಟಿಮಠ ಉದ್ಘಾಟಿಸಿದರು.