
ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಆಯೋಜಿಸಲಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಡತನ ನಿರ್ಮೂಲನೆ ಮಾಡಬೇಕು. ಕರ್ನಾಟಕದ ಜನತೆ ವಿದ್ಯಾವಂತರಾಗಬೇಕು. ಹಳ್ಳಿಯ ಹುಡುಗರು ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ಸಮಾಜವನ್ನು ಕಟ್ಟಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಜನಕಲ್ಯಾಣದ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಹಾಗೂ ಈ ಸಂಬಂಧ ಯಾವುದೇ ಟೀಕೆಗೂ ಸರ್ಕಾರ ಬಗ್ಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೇನು ಹೊಸ ವಿಚಾರವಲ್ಲ. ಜನರಿಗೆ ಆರ್ಥಿಕ ಶಕ್ತಿ ನೀಡಬೇಕು. ದುಡಿಯುವ ಕೈಗೆ ಉದ್ಯೋಗ ಸಿಗಬೇಕು. ಜನರು ಹಸಿವಿನಿಂದ ಮುಕ್ತರಾಗಬೇಕೆಂಬ ಸದುದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಗಳಿಂದ ಜನರ ಬದುಕಿನಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ. ಜನರ ಕಷ್ಟ-ಸುಖಗಳನ್ನು ನಮ್ಮ ಸರ್ಕಾರ ಅರ್ಥ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜನರ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.
ಜಾಗೃತ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಡಾ: ಎಚ್.ವಿ. ವಾಸು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ , ಜಿಪಂ ಸಿಇಒ ಬಿ.ವಿ. ಅಶ್ವಿಜ ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ನಿಕೇತ್ ರಾಜ್, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಗೌಡ, ಉಪಾಧ್ಯಕ್ಷ ನರಸೀಯಪ್ಪ, ಶಿವಪ್ರಸಾದ್, ಹನುಮಂತಪ್ಪ, ಪಂಚಾಕ್ಷರಪ್ಪ, ಬಸವರಾಜು, ಅಂಬರೀಷ್ ಹಾಗೂ ವಿವಿಧ ತಾಲ್ಲೂಕುಗಳ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ ವಿವಿಧ ತಾಲೂಕುಗಳಿಂದ 4 ಸಾವಿರಕ್ಕೂ ಹೆಚ್ಚು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಭಾಗವಹಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತಿಯಿಂದ ವಿವಿಧ ಇಲಾಖೆಗಳ ಹಾಗೂ ಗ್ಯಾರಂಟಿ ಯೋಜನೆಗಳ ಮಳಿಗೆಗಳನ್ನು ತೆರೆಯಲಾಗಿತ್ತು.