ಮಹಿಳೆಯರ ಸಬಲೀಕರಣಕ್ಕೆ ಹೊಸ ಆಯಾಮ ನೀಡಿದ ಗ್ಯಾರಂಟಿ

KannadaprabhaNewsNetwork |  
Published : Sep 30, 2025, 12:00 AM IST
29ಕೆಬಿಪಿಟಿ.1.ಬಂಗಾರಪೇಟೆ ತಾಪಂಃನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಬಡವ, ದಲಿತರ ರಕ್ಷಣೆ ಮತ್ತು ಬಡತನ ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮುಂಬರುವ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಶೇ.ನೂರರಷ್ಟು ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಜೀವನಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಗ್ಯಾರಂಟಿ ಸಮಿತಿಗಳ ತಾಲೂಕು ಅಧ್ಯಕ್ಷ ಪಾರ್ಥಸಾರಥಿ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪರಿಶೀಲನ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ರಾಜ್ಯಾದ್ಯಂತ ಶೇ.70-95 ರಷ್ಟು ಮಹಿಳೆಯರ ಜೀವನ ಮಟ್ಟ ಸುಧಾರಿಸಿದೆ ಎಂದು ಸ್ವತಂತ್ರ ಅಧ್ಯಯನವೊಂದು ಬಹಿರಂಗಪಡಿಸಿದೆ ಎಂದು ಹೇಳಿದರು.

ಎಲ್ಲರಿಗೂ ತಲುಪಿಸಲು ಯತ್ನಬಡವ, ದಲಿತರ ರಕ್ಷಣೆ ಮತ್ತು ಬಡತನ ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮುಂಬರುವ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಶೇ.ನೂರರಷ್ಟು ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದರು. ಬೊಕ್ಕಸಕ್ಕೆ ಹೋರೆ ಆಗಿಲ್ಲ

ಈ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ಹೊರೆ ಆಗದಂತೆ ಹಣಕಾಸು ವ್ಯವಸ್ಥೆಯಲ್ಲಿ ಬದಲಾವಣೆ ತರುವ ಮೂಲಕ ರಾಜ್ಯ ಸರಕಾರ ಜನತೆಯ ಬೆನ್ನೆಲುಬಾಗಿ ಕೆಲಸ ಮಾಡುತ್ತಿದೆ. ಈ ಸಮಿತಿಯು ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಗಳ ಉಪಾಧ್ಯಕ್ಷರಾದ ಸೈಯದ್ ಇಮದಾದ್ ಉಲ್ಲಾ , ಸದಸ್ಯರಾದ ಸಿ.ಎಂ ಹರೀಶ್ ಕುಮಾರ್, ನಂದ,ಶಂಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ