ಬೆಲೆ ಏರಿಕೆ ಹೊರೆ ತಡೆಯಲೆಂದೇ ‘ಗ್ಯಾರಂಟಿ’: ಡಿಕೆಶಿ

KannadaprabhaNewsNetwork |  
Published : Nov 09, 2026, 01:45 AM IST
ಡಿಕೆಶಿಯಿಂದ ಪೂಜೆ | Kannada Prabha

ಸಾರಾಂಶ

ಪೆಟ್ರೋಲ್, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಭಾರದಿಂದ ಜನರನ್ನು ತಪ್ಪಿಸಲು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಪೆಟ್ರೋಲ್, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಭಾರದಿಂದ ಜನರನ್ನು ತಪ್ಪಿಸಲು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಭಾನುವಾರ ಹಾಸನದಲ್ಲಿ ಬೆಲೆ ಏರಿಕೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬೆಲೆ ಏರಿಕೆಯಿಂದ ಜನರು ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾರಂಟಿ ಯೋಜನೆಯು ಲಕ್ಷಾಂತರ ಜನರಿಗೆ ಸೇರುತ್ತಿದೆ. ವಿಪಕ್ಷಗಳು ವಿನಾಃ ಕಾರಣ ಟೀಕೆ ಮಾಡುತ್ತಿದೆ ಎಂದು ಆರೋಪಿಸಿದರು. ಜೊತೆಗೆ ಬೆಲೆ ಏರಿಕೆಯ ಹೊಡೆತದ ಸಂದರ್ಭದಲ್ಲಿ ಜನರ ಕೈಗೆ ಹಣ ಸೇರಬೇಕೆಂಬ ಉದ್ದೇಶದಿಂದ ಗ್ಯಾರಂಟಿ ಜಾರಿಗೆ ತರಲಾಗಿದೆ. ಒಂದು ಕಡೆ ಜನರಿಗೆ ನೆರವು ನೀಡುತ್ತಿದ್ದೇವೆ. ಮತ್ತೊಂದು ಕಡೆ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದೇವೆ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಜನರಿಗೆ ಏನು ಕೊಡುಗೆ ನೀಡಿದೆ ಎಂಬುದನ್ನು ಅವರು ಹೇಳಬೇಕು ಎಂದರು.

ಕೇಂದ್ರ ವಿಫಲ: ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸುವ ನಿಟ್ಟಿನಲ್ಲಿ ನಿರೀಕ್ಷಿತ ಕ್ರಮಗಳನ್ನು ಕೈಗೊಂಡಿಲ್ಲ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಕೇಳುತ್ತಿದ್ದಾರೆ. ಸಕ್ಕರೆ ಸೇರಿದಂತೆ ಕೃಷಿ ಉತ್ಪನ್ನಗಳ ಬೆಲೆ ನಿಗದಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕನಿಷ್ಠ ಬೆಂಬಲ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ರೈತರ ಹಿತಾಸಕ್ತಿ ಕಾಪಾಡುವ ಬಗ್ಗೆ ಮಾತನಾಡುವವರು ಮೊದಲು ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲಿ ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ