ಮಹಿಳೆಯರ ಸ್ವಾವಲಂಬಿತನಕ್ಕೆ ಗ್ಯಾರಂಟಿ ನೆರವು: ಉಲ್ಲಾಸ ಶಾನಭಾಗ

KannadaprabhaNewsNetwork |  
Published : Feb 04, 2026, 02:45 AM IST
ಫೋಟೋ ಫೆ.೨ ವೈ.ಎಲ್.ಪಿ. ೦೨ | Kannada Prabha

ಸಾರಾಂಶ

ಚುನಾವಣೆ ಪೂರ್ವದಲ್ಲಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಸಂಪೂರ್ಣ ಯಶಸ್ವಿಯಾಗಿ ಈಡೇರಿಸಿದ ನಮ್ಮ ಸರ್ಕಾರ ನುಡಿದಂತೆ ನಡೆದಿದೆ.

ಉಮ್ಮಚಗಿ, ಹಿತ್ಲಳ್ಳಿ, ಕುಂದರಗಿ ಗ್ರಾಪಂ ವ್ಯಾಪ್ತಿಯ ಗ್ಯಾರಂಟಿ ಗ್ರಾಮೀಣ ಶಿಬಿರ

ಕನ್ನಡಪ್ರಭ ವಾರ್ತೆ ಯಲ್ಲಾಪುರ

ಚುನಾವಣೆ ಪೂರ್ವದಲ್ಲಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಸಂಪೂರ್ಣ ಯಶಸ್ವಿಯಾಗಿ ಈಡೇರಿಸಿದ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ ಹೇಳಿದರು.

ತಾಲೂಕಿನ ಕುಂದರಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಿದ್ದ ಉಮ್ಮಚಗಿ, ಹಿತ್ಲಳ್ಳಿ, ಕುಂದರಗಿ ಗ್ರಾಪಂ ವ್ಯಾಪ್ತಿಯ ಗ್ಯಾರಂಟಿ ಗ್ರಾಮೀಣ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರ ಸ್ವಾವಲಂಬಿತನಕ್ಕೆ ಯೋಜನೆ ನೆರವಾಗಿದೆ. ಗ್ರಾಮೀಣ ಮಟ್ಟದಲ್ಲಿ ೭ ಶಿಬಿರಗಳನ್ನು ಈವರೆಗೆ ನಡೆಸಲಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹೇರಂಬ ಹೆಗಡೆ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಯ ಪೋಸ್ಟರ್‌ನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಹೇರಂಬ ಹೆಗಡೆ ಹಾಗೂ ಗ್ಯಾರಂಟಿ ಯೋಜನೆಯ ಫಲಾನುಭವಿ ಕಮಲಾ ಮಡಿವಾಳ ಅವರನ್ನು ಸನ್ಮಾನಿಸಲಾಯಿತು.

ಹೆಸ್ಕಾಂ ಎಇಇ ರಮಾಕಾಂತ ನಾಯ್ಕ, ಸಾರಿಗೆ ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ್, ಸಿಡಿಪಿಒ ಶ್ರೀದೇವಿ ಪಾಟೀಲ ವರದಿ ಮಂಡಿಸಿದರು.

ತಾಪಂ ಇಒ ರಾಜೇಶ ಧನವಾಡಕರ್, ಕುಂದರಗಿ ಗ್ರಾಪಂ ಅಧ್ಯಕ್ಷೆ ಯಮುನಾ ಸಿದ್ದಿ, ಉಪಾಧ್ಯಕ್ಷೆ ಸೌಮ್ಯಾ ನಾಯ್ಕ, ಉಮ್ಮಚಗಿ ಗ್ರಾಪಂ ಅಧ್ಯಕ್ಷ ಕುಪ್ಪಯ್ಯ ಪೂಜಾರಿ, ಹಿತ್ಲಳ್ಳಿ ಗ್ರಾಪಂ ಅಧ್ಯಕ್ಷ ಸತ್ಯನಾರಾಯಣ ಹೆಗಡೆ, ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಗಾಂವ್ಕರ, ತಾಲೂಕಾ ಸಮಿತಿಯ ಸದಸ್ಯರಾದ ನರ್ಮದಾ ನಾಯ್ಕ, ಮುಶರತ್ ಖಾನ್, ನರಸಿಂಹ ನಾಯ್ಕ, ಫಕೀರ ಹರಿಜನ, ಶಾರದಾ ರಾಠೋಡ ಉಪಸ್ಥಿತರಿದ್ದರು.

ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ, ಲಿಂಬು-ಚಮಚ ಹಾಗೂ ಸೂಜಿದಾರ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದತ್ತಾತ್ರೇಯ ನಾಯ್ಕ ಸ್ವಾಗತಿಸಿದರು. ಎಂ.ಕೆ. ಭಟ್ಟ ಯಡಳ್ಳಿ ನಿರ್ವಹಿಸಿದರು. ಮಹೇಶ ನಾಯ್ಕ ಇಡಗುಂದಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!