ಬಡವರ ಬದುಕಿಗೆ ನೆಮ್ಮದಿ ನೀಡಿದ ಗ್ಯಾರಂಟಿ ಯೋಜನೆಗಳು

KannadaprabhaNewsNetwork | Updated : Feb 28 2024, 02:33 AM IST

ಸಾರಾಂಶ

ನುಡಿದಂತೆ ನಡೆದ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ಜತೆಗೆ ದಾಖಲೆಯ ಸರ್ವಶ್ರೇಷ್ಠ ಬಜೆಟ್ ನೀಡಿರುವುದು ಎದುರಾಳಿಗಳ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿಯವರು ಈಗ ತಬ್ಬಿಬ್ಬಾಗಿದ್ದಾರೆ ಎಂದು ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಹೇಳಿದ್ದಾರೆ. ಕೊಪ್ಪಳ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಕೊಪ್ಪಳ: ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ನೆಮ್ಮದಿಯ ಗ್ಯಾರಂಟಿ ನೀಡಿವೆ ಎಂದು ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಹೇಳಿದರು.

ಪಕ್ಷದ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರ್ಕಾರವು ಜನತೆಗೆ ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಗಳ ಬಗ್ಗೆ ವಾಗ್ದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕಾರ ಮಾಡಿ 3 ತಿಂಗಳ ಅವಧಿಯಲ್ಲಿಯೇ ಜಾರಿ ಮಾಡಿದ್ದಾರೆ. ಸ್ತ್ರೀ ಶಕ್ತಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಹಾಗೂ 5 ಕೆಜಿ ಅಕ್ಕಿಯ ನೇರ ನಗದು ಜಮೆ ಹಾಗೂ ಯುವ ನಿಧಿ ಯೋಜನೆಯಗಳಿಂದ ಜನರು ಇಂತಹ ತೀವ್ರ ಬರಗಾಲದಲ್ಲಿ ನೆಮ್ಮದಿ ಜೀವನ ನಡೆಸಲು ಸಹಕಾರಿಯಾಗಿವೆ ಎಂದರು.

ನುಡಿದಂತೆ ನಡೆದ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ಜತೆಗೆ ದಾಖಲೆಯ ಸರ್ವಶ್ರೇಷ್ಠ ಬಜೆಟ್ ನೀಡಿರುವುದು ಎದುರಾಳಿಗಳ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿಯವರು ಈಗ ತಬ್ಬಿಬ್ಬಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯ ಸುಳ್ಳಿನ ಗ್ಯಾರಂಟಿಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಥೇಚ್ಛವಾಗಿ ಸತ್ಯವೆಂಬಂತೆ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.

ಸುಳ್ಳಗಳನ್ನು ಬಂಡವಾಳ ಮಾಡಿಕೊಂಡು ಅಧಿಕಾರ ಹಿಡಿದಿದ್ದ ಪ್ರಧಾನ ಮಂತ್ರಿ ಮೋದಿ ಅವರಿಗೆ ಸೋಲುವ ಅರಿವಾಗಿದ್ದು, 2024 ಲೋಕಸಭಾ ಚುನಾವಣೆ ಪೂರ್ವದಲ್ಲಿ 400 ಸ್ಥಾನ ಗೆಲ್ಲುವುದಾಗಿ ಹೇಳಿ ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಹೇಳಿದರು.

ದೇಶ ಹಾಗೂ ರಾಜ್ಯದ ಜನತೆಗೆ ಜನಪರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಕೊಡುವ ಕಾಂಗ್ರೆಸ್‌ಗೆ ಜನರು ಬಹುಮತ ನೀಡುವುದು ಖಚಿತವಾಗಿದೆ. ರಾಜ್ಯದಲ್ಲಿ 20-25 ಎಂಪಿ ಸೀಟುಗಳು ಗೆಲ್ಲುವುದು ನಿಶ್ಚಿತವೆಂದು ಹೇಳಿದರು.

ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸದಸ್ಯ ಗೂಳಪ್ಪ ಹಲಗೇರಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಾಲಚಂದ್ರನ್, ಗ್ಯಾರಂಟಿ ಯೋಜನೆ ಸದಸ್ಯೆ ಜ್ಯೋತಿ ಗೊಂಡಬಾಳ, ತೋಟಪ್ಪ ಕಾಮನೂರು, ನಾಗರಾಜ ಚಳ್ಳೂಳ್ಳಿ, ರಾಜುರೆಡ್ಡಿ, ಕೃಷ್ಣರೆಡ್ಡಿ ಗಲಬಿ ಸುಬ್ಬಣ್ಣಚಾರ್ಯ ಗಿಣಗೇರಾ, ಚಾಂದಪಾಷಾ ಕಿಲ್ಲೇದಾರ, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ ಪಾಷಾ ಪಲ್ಟನ್, ಆನಂದ ಕಿನ್ನಾಳ ಇದ್ದರು.

Share this article