ಗ್ಯಾರಂಟಿಗಳು ಜನರ ಸಂಕಷ್ಟಕ್ಕೆ ಸಹಕಾರಿ

KannadaprabhaNewsNetwork |  
Published : Jun 22, 2025, 01:18 AM IST
ಚಿತ್ರ 1 | Kannada Prabha

ಸಾರಾಂಶ

ಹಿರಿಯೂರು ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಚಿವ ಡಿ.ಸುಧಾಕರ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ಸು ಕಂಡಿದ್ದು ರಾಜ್ಯದ ಜನರ ಸಂಕಷ್ಟಕ್ಕೆ ಆಸರೆಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಜನೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಸುಸೂತ್ರ ಅನುಷ್ಠಾನಕ್ಕಾಗಿ ಸಾಕಷ್ಟು ಕ್ರಮ ವಹಿಸಲಾಗಿದೆ. ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇನ್ನಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜವಾಬ್ದಾರಿ ಹೊತ್ತಿರುವ ಇಲಾಖೆಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು. ಗ್ಯಾರಂಟಿ ಯೋಜನೆಗಳ ಭವಿಷ್ಯದ ಚಟುವಟಿಕೆಗಳಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಬೇಕು. ಅರ್ಹ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವುದು ಅಧಿಕಾರಿಗಳ ಗುರಿಯಾಗಬೇಕು. ಕಾಂಗ್ರೆಸ್ ಪಕ್ಷದ ಈ ಜನಾನುರಾಗಿ ಯೋಜನೆಗಳನ್ನು ಜನರ ಮನೆ ಮನಸಿಗೆ ತಲುಪಿಸುವತ್ತ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.ಈ ವೇಳೆ ತಹಸೀಲ್ದಾರ್ ರಾಜೇಶ್ ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಖಾದಿ ರಮೇಶ್, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಗಿಡ್ಡೋಬನಹಳ್ಳಿ ಅಶೋಕ್, ಮಹಾಂತೇಶ್, ಹನುಮಂತರಾಯ, ಸಿಡಿಪಿಒ ರಾಘವೇಂದ್ರ, ಎಇಇ ಪೀರ್ ಸಾಬ್, ಆಹಾರ ನಿರೀಕ್ಷಕ ಲಿಂಗರಾಜು ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ